2 ಸಮುಯೇಲ 7:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು; ಅವನು ತಪ್ಪುಮಾಡಿದರೆ ಅವನಿಗೆ ಮನುಷ್ಯಶಿಕ್ಷೆಯನ್ನು ಕೊಡುವೆನು, ನರಪುತ್ರರಂತೆ ಅವನನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು. ಅವನು ಪಾಪಗಳನ್ನು ಮಾಡಿದರೆ ಇತರ ಜನರ ಮೂಲಕ ನಾನು ಅವನನ್ನು ದಂಡಿಸುವೆನು. ಅವರೇ ನನ್ನ ಚಾವಟಿಗಳಾಗಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ಆತನ ತಂದೆಯಾಗಿರುವೆನು. ಆತನು ನನಗೆ ಮಗನಾಗಿರುವನು. ಅವನು ಕೆಟ್ಟದ್ದನ್ನು ಮಾಡಿದರೆ, ನಾನು ಅವನನ್ನು ಮನುಷ್ಯರಿಂದ ಬೆಸುಗೆ ಹಾಕಿದ ಕೋಲಿನಿಂದಲೂ ಮನುಷ್ಯರ ಕೈಗಳಿಂದ ಹೊಡೆದ ಹೊಡೆತದಿಂದ ದಂಡಿಸುವೆನು. ಅಧ್ಯಾಯವನ್ನು ನೋಡಿ |