2 ಸಮುಯೇಲ 7:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೀನು ನಿನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೋಸ್ಕರ, ನಿನ್ನ ಇಷ್ಟಾನುಸಾರವಾಗಿ ಈ ಎಲ್ಲಾ ಮಹತ್ಕಾರ್ಯಗಳನ್ನು ನಡಿಸಿ, ಅವುಗಳ ಅನುಭವಗಳನ್ನು ನಿನ್ನ ಸೇವಕನಿಗೆ ಉಂಟುಮಾಡದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತಮ್ಮ ಸಂಕಲ್ಪ ಹಾಗೂ ದಯಾನುಸಾರ ಎಂತೆಂಥಾ ಮಹತ್ಕಾರ್ಯವನ್ನು ನಡೆಸಿದಿರಿ! ಅವುಗಳ ಅನುಭವವನ್ನೂ ನಿಮ್ಮ ದಾಸನಿಗಿತ್ತಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನೀನು ನಿನ್ನ ವಾಗ್ದಾನಗಳನ್ನು ನೆರವೇರಿಸುವದಕ್ಕೋಸ್ಕರ ನಿನ್ನ ಇಷ್ಟಾನುಸಾರವಾಗಿ ಈ ಎಲ್ಲಾ ಮಹತ್ಕಾರ್ಯಗಳನ್ನು ನಡಿಸಿ ಅವುಗಳ ಅನುಭವವನ್ನು ನಿನ್ನ ಸೇವಕನಿಗೆ ಉಂಟುಮಾಡಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನೀನು ಈ ಕಾರ್ಯವನ್ನು ನಿನ್ನ ವಾಗ್ದಾನದ ಪ್ರಕಾರವಾಗಿಯೂ ನಿನ್ನ ಚಿತ್ತದ ಪ್ರಕಾರವಾಗಿಯೂ ಮಾಡಿರುವೆ ಮತ್ತು ನಿನ್ನ ಸೇವಕನಿಗೆ ಅದನ್ನು ತಿಳಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿಮ್ಮ ವಾಕ್ಯದ ನಿಮಿತ್ತವಾಗಿಯೂ ನಿಮ್ಮ ಚಿತ್ತಾನುಸಾರವಾಗಿಯೂ ನಿಮ್ಮ ಸೇವಕನಿಗೆ ತಿಳಿಯಪಡಿಸುವ ಹಾಗೆ ಈ ಮಹಾಕಾರ್ಯಗಳನ್ನೆಲ್ಲಾ ಮಾಡಿದಿರಿ. ಅಧ್ಯಾಯವನ್ನು ನೋಡಿ |
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.