Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೇವರೇ, ಯೆಹೋವನೇ! ನೀನೇ ಮಹೋನ್ನತನು. ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ನೀನು ನಮಗೆ ನೀಡಿದ್ದೆಲ್ಲವನ್ನು ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೇ ದೇವಾ, ಸರ್ವೇಶ್ವರಾ, ತಾವು ಮಹೋನ್ನತರು, ತಮಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದ ಅವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ತಮ್ಮ ಹೊರತು ದೇವರೇ ಇಲ್ಲ ಎಂಬುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇವರೇ, ಯೆಹೋವನೇ, ನೀನೇ ದೊಡ್ಡವನು; ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರಾದ ಯೆಹೋವನೇ, ನಾನು ಕೇಳಿದ ಪ್ರಕಾರ ನೀನೇ ದೊಡ್ಡವನು; ನಿನ್ನ ಸಮಾನರು ಬೇರೆ ಯಾರೂ ಇಲ್ಲ; ನಿನ್ನ ಹೊರತು ಬೇರೆ ದೇವರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಸಾರ್ವಭೌಮ ಯೆಹೋವ ದೇವರೇ, ನೀವು ಮಹೋನ್ನತರಾಗಿದ್ದೀರಿ. ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:22
33 ತಿಳಿವುಗಳ ಹೋಲಿಕೆ  

ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು.


ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.


ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ಯೆಹೋವನು ದೊಡ್ಡವನು, ಬಹಳವಾಗಿ ಸ್ತುತಿಗೆ ಪಾತ್ರನು ಆಗಿದ್ದಾನೆ. ಎಲ್ಲಾ ದೇವತೆಗಳಲ್ಲಿ ಆತನೇ ಅದ್ಭುತನಾದವನು.


ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.


ನೀನು ನಡಿಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಬೇರೆ ಯಾವ ದೇವರು ನಡೆಸಲಾರನು?


“ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ.


ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.


ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?


ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು.


ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ.


ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?


ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.


ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು.


ಯೆಹೋವನು ದೊಡ್ಡವನೆಂದೂ, ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.


ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.


ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಸದಮಲಸ್ವಾಮಿಯು ಕೇಳುತ್ತಾನೆ.


ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು. ಏಕೆಂದರೆ ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.”


ಇಸ್ರಾಯೇಲರು ತಮ್ಮ ಮಕ್ಕಳಿಗೂ, ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡೆಸಿರುವ ಈ ಮಹತ್ಕಾರ್ಯಗಳನ್ನು ವಿವರಿಸಿ ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದ ಹಾಗೆ ಶಿಕ್ಷಿಸಿದನು ಎಂಬುದಾಗಿ ತಿಳಿಸಬೇಕು. ಹೀಗೆ ನಾನು ಫರೋಹನ ಹೃದಯವನ್ನು, ಅವನ ಪರಿವಾರದವರ ಹೃದಯಗಳನ್ನೂ ಕಠಿಣಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದನು.


ಫರೋಹನು ಮೋಶೆಗೆ, “ನಾಳೆ” ಎಂದನು. ಆಗ ಮೋಶೆಯು, “ನಿನ್ನ ಮಾತಿನ ಪ್ರಕಾರವೇ ಆಗಲಿ, ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವಿ.


ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.


“ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.


ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.


ಆರೋನನು ಐಗುಪ್ತ ದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ತನ್ನ ಕೈಚಾಚಲು ಕಪ್ಪೆಗಳು ಹೊರಟು ಬಂದು ದೇಶವನ್ನೆಲ್ಲಾ ತುಂಬಿಕೊಂಡವು.


ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.


ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು