2 ಸಮುಯೇಲ 7:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆದುದರಿಂದ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸು. ಸದಾಕಾಲವೂ ಅದರ ಮೇಲೆ ನಿನ್ನ ಕಟಾಕ್ಷವಿರಲಿ. ಕರ್ತನೇ, ಯೆಹೋವನೇ! ವಾಗ್ದಾನ ಮಾಡಿದವನು ನೀನೇ. ನಿನ್ನ ಆಶೀರ್ವಾದದಿಂದ ನಿನ್ನ ಸೇವಕನ ಮನೆಯಲ್ಲಿ ನಿತ್ಯ ಸೌಭಾಗ್ಯವಿರಲಿ” ಎಂದು ವಿಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಸದಾಕಾಲ ನಿಮ್ಮ ಅನುಗ್ರಹ ಅದರ ಮೇಲಿರಲಿ. ಸರ್ವೇಶ್ವರಾ, ಸರ್ವೇಶ್ವರಾ, ವಾಗ್ದಾನ ಮಾಡಿದವರು ತಾವೇ. ತಮ್ಮ ಆಶೀರ್ವಾದದಿಂದ ತಮ್ಮ ದಾಸನಾದ ನನ್ನ ಮನೆತನದಲ್ಲಿ ನಿತ್ಯ ಸೌಭಾಗ್ಯ ನೆಲಸಿರಲಿ!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆದದರಿಂದ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸು; ಸದಾಕಾಲವೂ ಅದರ ಮೇಲೆ ನಿನ್ನ ಕಟಾಕ್ಷವಿರಲಿ. ಕರ್ತನೇ, ಯೆಹೋವನೇ, ವಾಗ್ದಾನಮಾಡಿದವನು ನೀನೇ. ನಿನ್ನ ಆಶೀರ್ವಾದದಿಂದ ನಿನ್ನ ಸೇವಕನ ಮನೆಯಲ್ಲಿ ನಿತ್ಯ ಸೌಭಾಗ್ಯವಿರಲಿ ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ದಯವಿಟ್ಟು ನನ್ನ ಕುಟುಂಬವನ್ನು ಆಶೀರ್ವದಿಸು. ಅದು ನಿನ್ನ ಸನ್ನಿಧಿಯಲ್ಲಿ ಎಂದೆಂದಿಗೂ ಮುಂದುವರಿಯಲಿ. ದೇವರಾದ ಯೆಹೋವನೇ, ಆಶ್ಚರ್ಯಕರವಾದ ವಾಗ್ದಾನಗಳನ್ನು ನೀನು ನನಗೆ ಮಾಡಿರುವೆ. ನಿನ್ನ ಆಶೀರ್ವಾದದಿಂದ ನನ್ನ ಕುಟುಂಬವು ಎಂದೆಂದಿಗೂ ಆಶೀರ್ವಾದವನ್ನು ಹೊಂದಲಿ” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆದಕಾರಣ ಈಗ ನಿಮ್ಮ ಸೇವಕನ ಮನೆಯು ನಿಮ್ಮ ಮುಂದೆ ಶಾಶ್ವತವಾಗಿ ಇರುವ ಹಾಗೆ ಅದನ್ನು ಆಶೀರ್ವದಿಸಲು ಸಂತೋಷಪಡಿರಿ. ಸಾರ್ವಭೌಮ ಯೆಹೋವ ದೇವರೇ, ಅದನ್ನು ಹೇಳಿದವರು ನೀವೇ; ನಿಮ್ಮ ಆಶೀರ್ವಾದದಿಂದ ನಿಮ್ಮ ಸೇವಕನ ಮನೆಯಲ್ಲಿ ನಿತ್ಯವೂ ಸೌಭಾಗ್ಯವಿರಲಿ.” ಅಧ್ಯಾಯವನ್ನು ನೋಡಿ |