2 ಸಮುಯೇಲ 7:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನು ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರದಲ್ಲೇ ವಾಸಿಸುತ್ತಾ [ಅವರೊಡನೆ] ಸಂಚರಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಈಜಿಪ್ಟಿನಿಂದ ಇಸ್ರೇಲರನ್ನು ಹೊರತಂದ ಸಮಯದಲ್ಲಿ ನಾನು ಆಲಯದಲ್ಲಿ ವಾಸಮಾಡಲಿಲ್ಲ. ನಾನು ಗುಡಾರದಲ್ಲಿ ವಾಸಮಾಡುತ್ತಾ ಸಂಚರಿಸಿದೆನು. ಗುಡಾರವೇ ನನ್ನ ಆಲಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿಶ್ಚಯವಾಗಿ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು. ಅಧ್ಯಾಯವನ್ನು ನೋಡಿ |
ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.