2 ಸಮುಯೇಲ 7:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನಂದರೆ - ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ನಾಯಕನನ್ನಾಗಿ ನೇವಿುಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ನೀನು ಇದನ್ನು ನನ್ನ ಸೇವಕನಾದ ದಾವೀದನಿಗೆ ಹೇಳಲೇಬೇಕು: ‘ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ಹುಲ್ಲುಗಾವಲಿನಲ್ಲಿ ಕುರಿಕಾಯುತ್ತಿದ್ದ ನಿನ್ನನ್ನು ನಾನು ನನ್ನ ಜನರಾದ ಇಸ್ರೇಲರಿಗೆ ನಾಯಕನಾಗಿ ಮಾಡಲು ಕರೆತಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು. ಅಧ್ಯಾಯವನ್ನು ನೋಡಿ |