2 ಸಮುಯೇಲ 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾ ಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಉನ್ನತಿಗೆ ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೀನು ಹೋದಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀನು ಹೋದಲ್ಲೆಲ್ಲಾ ನಿನ್ನ ಸಂಗಡ ಇದ್ದೆನು; ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ದೊಡ್ಡದುಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀನು ಹೋದ ಸ್ಥಳಗಳಲ್ಲೆಲ್ಲಾ ನಿನ್ನೊಂದಿಗಿದ್ದೆನು. ನಿನ್ನ ಶತ್ರುಗಳನ್ನು ಸೋಲಿಸಿದೆನು. ನಾನು ನಿನ್ನನ್ನು ಲೋಕದ ಇತರ ಮಹಾಪುರುಷರಂತೆಯೇ ಪ್ರಸಿದ್ಧಿಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀನು ಎಲ್ಲಿ ಹೋದರೂ, ಅಲ್ಲಿ ನಿನ್ನ ಸಂಗಡ ಇದ್ದು, ನಿನ್ನ ಶತ್ರುಗಳನ್ನೆಲ್ಲಾ ನಿನ್ನ ಮುಂದೆಯೇ ಸಂಹರಿಸಿದೆನು. ಭೂಮಿಯಲ್ಲಿರುವ ಮಹಾಪುರುಷರ ಹೆಸರಿನ ಹಾಗೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು. ಅಧ್ಯಾಯವನ್ನು ನೋಡಿ |