Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಹೀಟೂಬನ ಮಗ ಚಾದೋಕನೂ ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:17
21 ತಿಳಿವುಗಳ ಹೋಲಿಕೆ  

ಅಹೀಟೂಬನ ಮಗನಾದ ಚಾದೋಕನೂ ಮತ್ತು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು. ಶವ್ಷನು ಲೇಖಕನು.


ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು.


ಯಾಜಕನಾದ ಚಾದೋಕನನ್ನೂ, ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳಗಳಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು.


ಅಹೀಟೂಬನ ಮಗ ಚಾದೋಕ್, ಇವನ ಮಗ ಅಹಿಮಾಚ್.


ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ,


ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ ಯಜ್ಞವನ್ನು ಅರ್ಪಿಸುತ್ತಿದ್ದನು.


ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು.


ಅವರು ಅರಸನನ್ನು ಕೂಗಿ ಕರೆದಾಗ, ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಅವರ ಬಳಿಗೆ ಬಂದರು.


ಎಲ್ಲಾಜಾರನು ಫೀನೆಹಾಸನನ್ನು ಪಡೆದನು; ಫೀನೆಹಾಸನು ಅಬೀಷೂವನನ್ನು ಪಡೆದನು;


ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ, ಅವನ ಕುಟುಂಬದವರಾದ ಇಪ್ಪತ್ತೆರಡು ಅಧಿಪತಿಗಳೂ,


ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.


ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.


ತರುವಾಯ ಹೂಷೈಯು ಯಾಜಕನಾದ ಚಾದೋಕ್ ಎಬ್ಯಾತಾರರಿಗೆ, “ಅಹೀತೋಫೆಲನು ಅಬ್ಷಾಲೋಮನಿಗೂ ಮತ್ತು ಇಸ್ರಾಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು, ನಾನು ಹೀಗೆ ಹೇಳಿದ್ದೇನೆ.


ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಿ. ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ತಡಮಾಡುತ್ತಿರುವುದು ಒಳ್ಳೆಯದಲ್ಲ’ ಎಂದು ಹೇಳಿರಿ.


ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ ನಿನ್ನ ಮಗನೂ, ಸೇವಕನೂ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ.


ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ.


ಸೌಲನ ಸಂಬಂಧಿಕರಾದ ಬೆನ್ಯಾಮೀನ್ಯರಲ್ಲಿ ಮೂರು ಸಾವಿರ ಸೈನಿಕರು ಬಂದರು. ಬೆನ್ಯಾಮೀನ್ಯರಲ್ಲಿ ಹೆಚ್ಚಿನ ಭಾಗದವರು ಸೌಲನ ಮನೆಯವರೊಂದಿಗೆ ಸೇರಿಕೊಂಡಿದ್ದರು.


ಆ ಮೇಲೆ ದಾವೀದನು ಚಾದೋಕ್, ಎಬ್ಯಾತಾರ್ ಎಂಬ ಯಾಜಕರನ್ನೂ, ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್ ಎಂಬ ಲೇವಿಯರನ್ನು ಕರೆದು ಅವರಿಗೆ, “ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವು,


ಹಿಲ್ಕೀಯನು ಶಲ್ಲೂಮನ ಮಗ; ಇವನು ಚಾದೋಕನ ಮಗ; ಇವನು ಅಹೀಟೂಬನ ಮಗ; ಇವನು ಅಮರ್ಯನ ಮಗ.


“‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು