Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಮಸ್ಕದ ಸಿರಿಯಾದವರು ಚೋಬದ ಅರಸನಾದ ಹದದೆಜೆರನಿಗೆ ನೆರವಾಗಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸದೆಬಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಹತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಚೋಬದ ರಾಜನಾದ ಹದದೆಜೆರನ ಸಹಾಯಕ್ಕೆ ದಮಸ್ಕದ ಅರಾಮ್ಯರು ಬಂದರು. ಆದರೆ ದಾವೀದನು ಆ ಇಪ್ಪತ್ತೆರಡು ಸಾವಿರ ಅರಾಮ್ಯರನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:5
9 ತಿಳಿವುಗಳ ಹೋಲಿಕೆ  

ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು. ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.


ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.


ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವುದಿಲ್ಲ; ರಾಹಾಬನ ಸಹಾಯಕರು ಆತನಿಗೆ ಅಡ್ಡಬಿದ್ದರಲ್ಲಾ.


ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.


ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು