Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೆಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಅರಾಮ್ಯರು ದಾವೀದನ ಸೇವಕರಾದರು ಮತ್ತು ಅವನಿಗೆ ಕಾಣಿಕೆಗಳನ್ನು ತಂದರು. ದಾವೀದನು ಹೋದ ಸ್ಥಳಗಳಲ್ಲೆಲ್ಲ ಯೆಹೋವನು ಜಯವನ್ನು ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:6
26 ತಿಳಿವುಗಳ ಹೋಲಿಕೆ  

ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.


ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ,


ಅವನು ಯೆಹೂದದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ರ ಪಟ್ಟಣಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿದನು.


ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾ ಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಉನ್ನತಿಗೆ ತರುವೆನು.


ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.


ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.


ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.


ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ” ಎಂದು ಹೇಳಿದನು.


ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.


ಒಂದು ದಿನ ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ಆಚೆ ಇರುವ ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೋಗೋಣ ಬಾ” ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.


ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.


ಅವನು ಹದದೆಜೆರನ ಸೇವಕರ ಬಳಿ ಇದ್ದ ಬಂಗಾರದ ಗುರಾಣಿಗಳನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.


ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರಿಂದ ತಾವು ಸೋತುಹೋದೆವೆಂದು ತಿಳಿದು, ಅವರೊಡನೆ ಒಪ್ಪಂದ ಮಾಡಿಕೊಂಡು, ಅವರಿಗೆ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಧೈರ್ಯದಿಂದ ಮುಂದೆ ಬರಲಿಲ್ಲ.


ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.


ಸೇನಾಧೀಶ್ವರನಾದ ಯೆಹೋವ ದೇವರು ಅವನ ಸಂಗಡ ಇದ್ದುದರಿಂದ ಅವನು ಆಧಿಕ ಪ್ರಬಲಗೊಳ್ಳುತ್ತಾ ಬಂದನು.


ಅಹಾಬನು ಮರಣಹೊಂದಿದ ನಂತರ ಮೋವಾಬ್ಯರು ಇಸ್ರಾಯೇಲರಿಗೆ ವಿರುದ್ಧವಾಗಿ ದಂಗೆ ಎದ್ದರು.


ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.


ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.


ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.


ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು