Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅರಸನು ಅವನಿಗೆ, “ಸೌಲನ ಕುಟುಂಬದಲ್ಲಿ ಯಾರಾದರೂ ಉಳಿದಿದ್ದರೆ ಹೇಳು, ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ” ಎಂದನು. ಆಗ ಚೀಬನು ಅರಸನಿಗೆ “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಒಬ್ಬ ಮಗನಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಅರಸನು, “ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆ ತೋರಿಸುತ್ತೇನೆ,” ಎಂದನು. ಆಗ ಚೀಬನು, “ಯೋನಾತಾನನಿಗೆ, ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅರಸನು ಅವನಿಗೆ - ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ ಅಂದನು. ಆಗ ಚೀಬನು ಅರಸನಿಗೆ - ಯೋನಾತಾನನಿಗೆ ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ರಾಜನಾದ ದಾವೀದನು, “ಸೌಲನ ಕುಟುಂಬದಲ್ಲಿ ಯಾವ ವ್ಯಕ್ತಿಯಾದರೂ ಉಳಿದಿರುವನೇ? ನಾನು ಆ ವ್ಯಕ್ತಿಗೆ ದೇವರ ಕರುಣೆಯನ್ನು ತೋರಿಸಬೇಕಾಗಿದೆ” ಎಂದು ಹೇಳಿದನು. ಚೀಬನು ರಾಜನಾದ ದಾವೀದನಿಗೆ, “ಯೋನಾತಾನನ ಮಗನೊಬ್ಬನು ಇನ್ನೂ ಇದ್ದಾನೆ. ಅವನ ಎರಡೂ ಕಾಲುಗಳು ಕುಂಟಾಗಿವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅರಸನು, “ನಾನು ದೇವರ ದಯೆ ತೋರಿಸುವ ಹಾಗೆ ಸೌಲನ ಕುಟುಂಬದಲ್ಲಿ ಇನ್ನೂ ಯಾವನಾದರೂ ಇದ್ದಾನೋ?” ಎಂದನು. ಆಗ ಚೀಬನು ಅರಸನಿಗೆ, “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಮಗನಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 9:3
11 ತಿಳಿವುಗಳ ಹೋಲಿಕೆ  

ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾಗಿದ್ದು ಹೇಗೆಂದರೆ, ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ, ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು.


ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.


ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.


ಅವನು, “ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ ‘ಕತ್ತೆಗೆ ತಡಿಹಾಕು. ನಾನು ಕುಳಿತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು’ ಎಂದು ಆಜ್ಞಾಪಿಸಿದೆನು.


ಆತನು ನಿಮ್ಮ ಪೂರ್ವಿಕರನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನು ಆರಿಸಿಕೊಂಡು,


ಆಗ ದಾವೀದನು ಅವನಿಗೆ, “ಹೆದರಬೇಡ, ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ, ಮತ್ತು ನೀನು ಪ್ರತಿ ದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು” ಎಂದು ಹೇಳಿದನು.


ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದರಿಂದ ಅವನು ಯೆರೂಸಲೇಮಿನಲ್ಲೇ ವಾಸಮಾಡಿದನು. ಅವನ ಎರಡು ಕಾಲುಗಳು ಕುಂಟಾಗಿದ್ದವು.


ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು