Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು ಮೆಫೀಬೋಶೆತನೇ ಅನ್ನಲು ಅವನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಆ ಮೆಫೀಬೋಶೆತನು ಬಂದು ದಾವೀದನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ದಾವೀದನು, “ಮೆಫೀಬೋಶೆತನೇ,” ಎಂದೊಡನೆ ಅವನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು - ಮೆಫೀಬೋಶೆತನೇ ಅನ್ನಲು ಅವನು - ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು, “ಮೆಫೀಬೋಶೆತನೇ” ಎಂದನು. ಮೆಫೀಬೋಶೆತನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸೌಲನ ಮಗನಾಗಿರುವ ಯೋನಾತಾನನ ಮಗ ಮೆಫೀಬೋಶೆತನು ದಾವೀದನ ಬಳಿಗೆ ಬಂದಾಗ, ಮೋರೆ ಕೆಳಗಾಗಿ ಬಿದ್ದು ವಂದಿಸಿದನು. ದಾವೀದನು, “ಮೆಫೀಬೋಶೆತನೇ,” ಎಂದನು. ಅವನು, “ಇಗೋ, ನಿನ್ನ ದಾಸನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 9:6
12 ತಿಳಿವುಗಳ ಹೋಲಿಕೆ  

ಯೋನಾತಾನನು ಮೆರೀಬ್ಬಾಳನನ್ನು ಪಡೆದನು. ಮೆರೀಬ್ಬಾಳನು ಮೀಕನನ್ನು ಪಡೆದನು.


ಯೋನಾತಾನನು ಮೆರೀಬ್ಬಾಳನನ್ನು ಪಡೆದನು; ಮೆರೀಬ್ಬಾಳನು ಮೀಕನನ್ನು ಪಡೆದನು.


ಆಗ ಅರಸನು ಅವನಿಗೆ, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ” ಎಂದು ಹೇಳಲು ಅವನು, “ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.


ಅಬೀಗೈಲಳು ದಾವೀದನನ್ನು ಕಂಡ ಕೂಡಲೇ ಕತ್ತೆಯಿಂದಿಳಿದು, ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು.


ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.


ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು.


ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.


ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾಗಿದ್ದು ಹೇಗೆಂದರೆ, ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ, ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು.


ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರೆಯಿಸಿದನು.


ಅವನು ತಿರುಗಿಕೊಂಡು ನನ್ನನ್ನು ನೋಡಿ ಕರೆದನು.


ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು