Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅನಂತರ ಪ್ರೇಷಿತರು ಓಲಿವ್ ತೋಪಿನ ಗುಡ್ಡದಿಂದ ಸುಮಾರು ಒಂದು ಕಿಲೊಮೀಟರು ದೂರದಲ್ಲಿರುವ ಜೆರುಸಲೇಮಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಅವರು ಎಣ್ಣೇಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಿಂದ ಯೆರೂಸಲೇವಿುಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇವಿುಗೂ ಸಬ್ಬತ್‍ದಿನದಲ್ಲಿ ಪ್ರಯಾಣಮಾಡುವಷ್ಟು ದೂರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಳಿಕ ಅಪೊಸ್ತಲರು ಆಲಿವ್ ಮರಗಳ ಗುಡ್ಡದಿಂದ ಜೆರುಸಲೇಮಿಗೆ ಹಿಂತಿರುಗಿಹೋದರು. (ಈ ಗುಡ್ಡಕ್ಕೂ ಜೆರುಸಲೇಮಿಗೂ ಸುಮಾರು ಅರ್ಧ ಮೈಲಿ ಅಂತರವಿದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅನಂತರ ಅಪೊಸ್ತಲರು ಯೆರೂಸಲೇಮಿಗೆ ಸಮೀಪದಲ್ಲಿದ್ದ ಓಲಿವ್ ಗುಡ್ಡದಿಂದ ಇಳಿದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅದು ಸಬ್ಬತ್ ದಿನದಲ್ಲಿ ಪ್ರಯಾಣ ಮಾಡುವಷ್ಟು ದೂರದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾನಾ ತೆನಿ ಒಲಿವೆತ್ ಮನುನ್ ನಾಂವ್ ಹೊತ್ತ್ಯಾ ಮಡ್ಡಿ ವೈನಾ ಜೆರುಜಲೆಮಾಕ್ ಫಾಟಿ ಯೆಲ್ಯಾನಿ ಜೆರುಜಲೆಮಾತ್ನಾ ಒಲಿವೆತ್ ಲೈ ಧುರ್ ನಾ, ಲೈ ಲೈ ಮಟ್ಲ್ಯಾರ್ ಅರ್‍ದೊ ಮೈಲ್ ಧುರ್ ಅಸಿಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:12
10 ತಿಳಿವುಗಳ ಹೋಲಿಕೆ  

ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ,


ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ


ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು.


ಬೇಥಾನ್ಯವು ಯೆರೂಸಲೇಮಿಗೆ ಸಮೀಪವಾಗಿತ್ತು. ಯೆರುಸಲೇಮಿನಿಂದ ಸುಮಾರು ಒಂದು ಹರಿದಾರಿಯಷ್ಟು ಅಂತರವಿತ್ತು.


ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.


ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.


ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು


ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.


ಅನಂತರ ಆತನು ಎಣ್ಣೆಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು,


ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು