Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 (ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ("ಇವನು ತನ್ನ ನೀಚ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡ. ಆದರೆ ಅದರಲ್ಲೇ ಪ್ರಾಣ ಕಳೆದುಕೊಂಡ. ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತುಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 (ಈ ಮನುಷ್ಯನು ತನ್ನ ದ್ರೋಹದಿಂದ ಸಂಪಾದಿಸಿದ ಹಣಕ್ಕೆ ಒಂದು ಹೊಲವನ್ನು ಕೊಂಡುಕೊಂಡನು; ಮತ್ತು ತಲೆಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಸುರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 (ಈ ಕಾರ್ಯ ಮಾಡುವುದಕ್ಕಾಗಿ ಯೂದನಿಗೆ ಹಣ ಕೊಡಲಾಗಿತ್ತು. ಆ ಹಣದಿಂದ ಒಂದು ಹೊಲವನ್ನು ಅವನಿಗಾಗಿ ಕೊಂಡುಕೊಳ್ಳಲಾಯಿತು. ಆದರೆ ಯೂದನು ತಲೆಕೆಳಗಾಗಿ ಬಿದ್ದಾಗ ಅವನ ಹೊಟ್ಟೆ ಒಡೆದುಹೋಯಿತು. ಅವನ ಕರುಳೆಲ್ಲಾ ಹೊರಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೂದನು, ದ್ರೋಹ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡನು; ಅಲ್ಲಿಯೇ ಅವನು ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಹ್ಯಾ ಮಾನ್ಸಾನ್ ಅಪ್ನಾಚ್ಯಾ ಖೊಟ್ಯಾ ಕಾಮಾನ್ ಕಮ್ವಲ್ಲ್ಯಾ ಪೈಸ್ಯಾನ್ ಎಕ್ ಸೆತ್ ಇಕಾತ್ ಘೆಟ್ಲ್ಯಾನ್, ತ್ಯಾತುರ್ ತೊಂಡಾನಿ ಪಡುನ್ ತೆಚೆ ಪೊಟ್ ಫುಟ್ಲೆ ಅನಿ ತೆಚಿ ಸಗ್ಳಿ ಅಂತ್ಡಾ ಭಾಯ್ರ್ ಪಡ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:18
12 ತಿಳಿವುಗಳ ಹೋಲಿಕೆ  

ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.


ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.


ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.


ಅವನು ಒಬ್ಬನಿಗೆ ಐದು ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.


ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು’” ಎಂದನು.


ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ, “ಅದನ್ನು ಡಬ್ಬಿಗೆ ಹಾಕು” ಎಂದು ಅಪ್ಪಣೆ ಮಾಡಿದಾಗ ನಾನು ಆ ಮೂವತ್ತು ಶೆಕೆಲ್ ಬೆಳ್ಳಿ ನಾಣ್ಯವನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು