Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅನಂತರ ಚೀಟುಹಾಕಿದರು. ಅದು ಮತ್ತೀಯನ ಪರವಾಗಿತ್ತು. ಅವನನ್ನು ಹನ್ನೊಂದು ಮಂದಿಯೊಡನೆ ಪ್ರೇಷಿತಸ್ಥಾನಕ್ಕೆ ಸೇರಿಸಿಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಮೇಲೆ ಅವರಿಗೋಸ್ಕರ ಚೀಟುಹಾಕಿದರು. ಚೀಟು ಮತ್ತೀಯನಿಗೆ ಬಂದದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರ ಸಂಗಡ ಸೇರಿ ಎಣಿಸಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಳಿಕ ಅಪೊಸ್ತಲರು ಅವರಿಬ್ಬರಲ್ಲಿ ಒಬ್ಬನನ್ನು ಆರಿಸಿಕೊಳ್ಳಲು ಚೀಟಿಹಾಕಿದರು. ಚೀಟಿ ಮತ್ತೀಯನಿಗೆ ಬಂದದ್ದರಿಂದ ಹನ್ನೊಂದು ಮಂದಿಯೊಂದಿಗೆ ಅವನೂ ಅಪೊಸ್ತಲನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮಾನಾ ತೆಂಚ್ಯಾ ದೊಗ್ಯಾಂಚ್ಯಾ ಮದ್ದಿ ಚಿಟಿಯಾ ಘಾಟ್ಲ್ಯಾನಿ ಅನಿ ಮಾಥ್ಥಿಯಾಸಾಚೆ ನಾವ್ ವೈರ್ ಪಡ್ಲೆ ಅಶೆ ತೆಕಾ ಅಕ್ರಾ ಅಪೊಸ್ತಲಾಂಚ್ಯಾ ತಾಂಡ್ಯಾತ್ ಭುತ್ತುರ್ ಘೆವ್ನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:26
15 ತಿಳಿವುಗಳ ಹೋಲಿಕೆ  

ಆಗ ಅವನು ಆ ಹೋತಗಳಲ್ಲಿ ಒಂದು ಯೆಹೋವನಿಗೋಸ್ಕರವೆಂದು ಮತ್ತೊಂದು ಅಜಾಜೇಲನಿಗೋಸ್ಕರವೆಂದು ಚೀಟುಗಳನ್ನು ಬರೆದು ಹಾಕಬೇಕು.


ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟು ಹಾಕಿ ದೇಶವನ್ನು ಅವರ ಕುಲಗಳಿಗೆ ಹಂಚಿಕೊಟ್ಟನು.


ಅನಂತರ ನಾವಿಕರೆಲ್ಲರು “ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣರೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ” ಎಂಬುದಾಗಿ ಮಾತನಾಡಿಕೊಂಡು ಚೀಟುಹಾಕಲು ಚೀಟು ಯೋನನ ಹೆಸರಿಗೆ ಬಂದಿತು.


ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.


ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.


ವಿವೇಕಿಗೆ ವಿವೇಕವೇ ಜೀವದ ಬುಗ್ಗೆ, ಮೂರ್ಖನಿಗೆ ಮೂರ್ಖತನವೇ ದಂಡನೆ.


ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.


ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯೊರ್ದನಿನ ಪಶ್ಚಿಮದ ಕಾನಾನ ದೇಶವನ್ನು ಚೀಟು ಹಾಕಿ ಇಸ್ರಾಯೇಲರ ಒಂಭತ್ತುವರೆ ಕುಲದವರಿಗೆ ಸ್ವತ್ತಾಗಿ ಕೊಟ್ಟನು


ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿ ಉರಿಸುವುದಕ್ಕಾಗಿ, ಪ್ರತಿ ವರ್ಷವೂ ನಿಯಮಿತ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ, ಆಯಾ ಗೋತ್ರಾನುಸಾರ ಕಟ್ಟಿಗೆ ದಾನ ಮಾಡತಕ್ಕವರು ಇಂಥವರೇ ಎಂಬುದನ್ನು ಯಾಜಕರೂ, ಲೇವಿಯರೂ, ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟು ಹಾಕಿ ಗೊತ್ತುಮಾಡಿಕೊಳ್ಳುತ್ತೇವೆ.


ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.


ಮಡಲಿನಲ್ಲಿ ಚೀಟು ಹಾಕಬಹುದು, ಅದರ ತೀರ್ಪು ಯೆಹೋವನದೇ.


ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು.


ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ,


ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು