ಅಪೊಸ್ತಲರ ಕೃತ್ಯಗಳು 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನು ಬಾಧೆಪಟ್ಟು ಸತ್ತ ಮೇಲೆ ತನ್ನನ್ನು ಜೀವಂತನೆಂದು ಅನೇಕ ಪ್ರಮಾಣಗಳಿಂದ ಅಪೊಸ್ತಲರಿಗೆ ತೋರಿಸಿಕೊಂಡನು. ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವಾದ ಸಂಗತಿಗಳನ್ನು ಹೇಳುತ್ತಾ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇದು ಆತನ ಮರಣಾನಂತರ ನಡೆದ ಸಂಗತಿ. ತಾನು ಜೀವಂತವಾಗಿರುವುದನ್ನು ಆತನು ಅಪೊಸ್ತಲರಿಗೆ ತೋರ್ಪಡಿಸಿದನು ಮತ್ತು ಶಕ್ತಿಯುತವಾದ ಅನೇಕ ಕಾರ್ಯಗಳನ್ನು ಮಾಡುವುದರ ಮೂಲಕ ಅದನ್ನು ನಿರೂಪಿಸಿದನು. ಯೇಸು ಜೀವಂತವಾಗಿ ಎದ್ದುಬಂದ ನಂತರದ ನಲವತ್ತು ದಿನಗಳ ಅವಧಿಯಲ್ಲಿ ಅಪೊಸ್ತಲರು ಆತನನ್ನು ಅನೇಕ ಸಲ ನೋಡಿದರು. ಯೇಸು ದೇವರ ರಾಜ್ಯದ ಕುರಿತು ಅಪೊಸ್ತಲರೊಂದಿಗೆ ಮಾತಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಅಪ್ನಾಚ್ಯಾ ಮರ್‍ನಾಚ್ಯಾ ಮಾನಾಚ್ಯಾ ಎಳಾರ್ ಅಪ್ನಿ ಅನಿ ಪರ್ತುನ್ ಝಿತ್ತೊ ಹೊಲಾ ಮನುನ್ ಸುಮಾರ್ ಖಾತ್ರಿಯಾಂಚ್ಯಾ ವೈನಾ ತೆನಿ ದಾಕ್ವುನ್ ದಿಲ್ಯಾನ್, ಅನಿ ತೊ ಚಾಳಿಸ್ ದಿಸ್ ಪತರ್ ತೆಂಚ್ಯಾ ನದ್ರೆಕ್ ಪಡ್ಲೊ, ಅನಿ ದೆವಾಚ್ಯಾ ರಾಜಾಚ್ಯಾ ವಿಶಯಾತ್ ಬೊಲುನ್ಗೆತ್ ತೆಂಚ್ಯಾಕ್ಡೆ ರ್‍ಹಾಲೊ. ಅಧ್ಯಾಯವನ್ನು ನೋಡಿ |