Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಪವಿತ್ರ್ ಆತ್ಮೊ ತುಮ್ಚ್ಯಾ ವರ್‍ತಿ ಯೆತಾ ತನ್ನಾ ತುಮ್ಕಾ ಬಳ್ ಗಾವ್ತಾ. ಮಾನಾ ಜೆರುಜಲೆಮಾಕ್ ,ಸಗ್ಳ್ಯಾ ಜುದೆಯ್ ಪ್ರಾಂತ್ಯಾತ್ ಅನಿ ಸಮರ್ಯಾತ್‍ ಅನಿ ಜಗಾಚ್ಯಾ ಆಕ್ರಿ ಪತರ್ಬಿ ತುಮಿ ಮಾಕಾ ಸಾಕ್ಷಿ ಹೊವ್ನ್ ರ್‍ಹಾತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:8
34 ತಿಳಿವುಗಳ ಹೋಲಿಕೆ  

ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.


ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.


ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ” ಎಂದು ಹೇಳಿದರು.


ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.


ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.


ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”


ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.


ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.


ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು.


ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.


ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.


ನೀನು ಕಂಡು, ಕೇಳಿದ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು.


ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.


ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.


ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”


ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”


ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.


ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.


ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು.


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು