Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ಅವನು ‘ಇಟಲಿಯ ದಳ’ದಲ್ಲಿ ಒಬ್ಬ ಶತಾಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿಕೊಳ್ಳುವ ಒಂದು ಪಟಾಲವಿುನ ಶತಾಧಿಪತಿಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ರೋಮಿನ ಸೈನ್ಯಕ್ಕೆ ಸೇರಿದ “ಇಟಲಿಯ ದಳ”ದಲ್ಲಿ ಅವನು ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೈಸರೈಯದಲ್ಲಿ ಕೊರ್ನೇಲ್ಯ ಎಂಬುವನಿದ್ದನು. “ಇಟಲಿಯ ದಳ” ಎಂದು ಹೆಸರಿನ ದಳಕ್ಕೆ ಅವನು ಶತಾಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಸೆಜಾರೆಯ ಮನ್ತಲ್ಯಾ ಶಾರಾತ್ ಕೊರ್ನೆಲ್ ಮನ್ತಲೊ ಎಕ್ಲೊ ಹೊತ್ತೊ, ತೊ ಇಟಲಿ ಸೈನ್ಯಾಚೊ ಎಕ್ ಶತಾದಿಪತಿ ಹೊವ್ನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:1
19 ತಿಳಿವುಗಳ ಹೋಲಿಕೆ  

ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.


ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು,


ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.


ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,


ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.


ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.


ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.


ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.


ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; “ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.”


ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು.


ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು.


ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.


ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.


ಅಲ್ಲಿ ದಂಡಿನ ಶತಾಧಿಪತಿಗೆ ಇಷ್ಟನಾದ ಒಬ್ಬ ಆಳು ಕ್ಷೇಮವಿಲ್ಲದೆ ಸಾಯುವ ಹಾಗಿದ್ದನು.


ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು.


ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು.


ಅವರು ಅವನನ್ನು ಕೊಲ್ಲುವುದಕ್ಕೆ ಯತ್ನಿಸುತ್ತಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲಮಿನ ಸಹಸ್ರಾಧಿಪತಿಗೆ ವರದಿ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು