Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ; “ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದೆಂದು” ಪುನಃ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಮತ್ತೊಮ್ಮೆ ಆ ವಾಣಿ ಅವನಿಗೆ, “ದೇವರೇ ಶುದ್ಧೀಕರಿಸಿರುವ ಯಾವುದನ್ನೂ ಅಶುದ್ಧವೆನ್ನಬೇಡ,” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬೇಡವೆಂದು ತಿರಿಗಿ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಆ ವಾಣಿಯು ಅವನಿಗೆ, “ದೇವರು ಇವುಗಳನ್ನು ಶುದ್ಧೀಕರಿಸಿದ್ದಾನೆ. ಇವುಗಳನ್ನು ‘ಅಪವಿತ್ರ’ವೆಂದು ಹೇಳಬೇಡ” ಎಂದು ಮತ್ತೆ ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ವಾಣಿಯು ಎರಡನೆಯ ಬಾರಿಗೆ, “ದೇವರು ಶುದ್ಧೀಕರಿಸಿದ ಯಾವುದನ್ನೂ ಅಶುದ್ಧವೆನ್ನಬೇಡ,” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ತ್ಯಾ ಧನಿಯಾನ್ ತೆಕಾ ದೆವಾನ್ ಹೆ ಸಗ್ಳ್ಯೆ ಶುದ್ದ್ ಕರ್‍ಲಾ, ಹೆಕಾ ಸಗ್ಳ್ಯಾಕ್ ಬ್ರಸ್ಟ್ ಮನುನ್ ಸಾಂಗುನಕೊ! ಮನುನ್ ಅನಿ ಪರ್ತುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:15
17 ತಿಳಿವುಗಳ ಹೋಲಿಕೆ  

ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.


ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು” ಎಂದು ಹೇಳಿದನು.


ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.


ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.


ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.


ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.


ಅದಕ್ಕೆ; “ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು” ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು.


ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು.


ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.


ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.


ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”


ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.


ಹೀಗೆ ಮೂರು ಸಾರಿ ಆಯಿತು. ಆದ ಮೇಲೆ ಆ ವಸ್ತುವು ಆಕಾಶದೊಳಗೆ ಸೇರಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು