Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇತ್ತ ಪೇತ್ರನು ತಾನು ಕಂಡ ದರ್ಶನದ ಅರ್ಥವೇನಿರಬಹುದೆಂದು ತಬ್ಬಿಬ್ಬಾದನು. ಅಷ್ಟರಲ್ಲಿ ಕೊರ್ನೇಲಿಯನು ಕಳುಹಿಸಿದ್ದ ಆಳುಗಳು ಸಿಮೋನನ ಮನೆಯನ್ನು ವಿಚಾರಿಸಿ ಕಂಡುಹಿಡಿದರು. ಹೊರಬಾಗಿಲ ಬಳಿ ನಿಂತುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪೇತ್ರನು ತಾನು ಕಂಡ ಈ ದರ್ಶನದ ಅರ್ಥವೇನಿರಬಹುದೆಂದು ಆಶ್ಚರ್ಯಗೊಂಡನು. ಅಷ್ಟರಲ್ಲಿಯೇ, ಕೊರ್ನೇಲಿಯನು ಕಳುಹಿಸಿದ್ದ ಜನರು ಸೀಮೋನನ ಮನೆಯನ್ನು ಕಂಡುಕೊಂಡಿದ್ದರು. ಅವರು ಬಾಗಿಲ ಬಳಿಯಲ್ಲಿ ನಿಂತುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ದರ್ಶನದ ಅರ್ಥವೇನೆಂದು ಪೇತ್ರನು ಯೋಚಿಸುತ್ತಿರಲು, ಇಗೋ, ಕೊರ್ನೇಲ್ಯನು ಕಳುಹಿಸಿದ ಜನರು ಸೀಮೋನನ ಮನೆಯನ್ನು ಕಂಡುಕೊಂಡು ಅಲ್ಲಿ ದ್ವಾರದ ಬಳಿಯಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಪೆದ್ರುಕ್ ಅಪ್ನಿ ಬಗಲ್ಲ್ಯಾ ದರ್ಶನಾಚೊ ಅರ್ಥ್ ಕಾಯ್ ಹೊವ್ಕ್ ಫಿರೆ ಮನುನ್ ಅಜಾಪ್ ಹೊಲೆ, ತನ್ನಾಚ್ ಕೊರ್ನೆಲಾನ್ ದಾಡಲ್ಲ್ಯಾ ಲೊಕಾನಿ ಸಿಮಾವಾಚೆ ಘರ್ ವಳ್ಕುನ್ ಕಾಡುನ್ ತೆನಿ ದಡ್ಪ್ಯಾಚ್ಯಾ ಜಗ್ಗೊಳ್ ಇಬೆ ರಾವ್ನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:17
9 ತಿಳಿವುಗಳ ಹೋಲಿಕೆ  

ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.


ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ.


ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.


ಆ ಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮದ ಕೆಲಸ ಮಾಡುವ ಸೀಮೋನನೆಂಬುವನ ಬಳಿಯಲ್ಲಿ ಬಹಳ ದಿನಗಳ ವರೆಗೂ ಇದ್ದನು.


ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.


ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”


ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?


ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; “ಅನನೀಯನೇ,” ಎಂದು ಅವನನ್ನು ಕರೆಯಲು, ಅವನು; “ಕರ್ತನೇ, ಇಗೋ, ಇದ್ದೇನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು