Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪ ಪಟ್ಟಣದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಪೇತ್ರನು ಅವರನ್ನು ಒಳಕ್ಕೆ ಬರಮಾಡಿಕೊಂಡು ಉಪಚರಿಸಿ, ರಾತ್ರಿ ಅಲ್ಲೇ ತಂಗುವಂತೆ ಮಾಡಿದನು. ಮಾರನೆಯ ದಿನ ಪೇತ್ರನು ಅವರೊಡನೆ ಹೋದನು. ಜೊತೆಯಲ್ಲಿ ಜೊಪ್ಪದ ಕೆಲವು ಸಹೋದರರೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪೇತ್ರನು ಅವರನ್ನು ಒಳಗೆ ಕರೆದು, ಆ ರಾತ್ರಿ ಅಲ್ಲೇ ಇರಬೇಕೆಂದು ಕೇಳಿಕೊಂಡನು. ಮರುದಿನ ಪೇತ್ರನು ಸಿದ್ಧನಾಗಿ, ಆ ಮೂವರೊಂದಿಗೆ ಹೊರಟನು. ಜೊಪ್ಪದ ವಿಶ್ವಾಸಿಗಳಲ್ಲಿ ಕೆಲವರು ಅವನೊಂದಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಪೇತ್ರನು ಅವರನ್ನು ತನ್ನ ಅತಿಥಿಗಳಾಗಿರಲು ಮನೆಯೊಳಗೆ ಕರೆದನು. ಮರುದಿನ ಪೇತ್ರನು ಅವರೊಂದಿಗೆ ಪ್ರಯಾಣ ಬೆಳೆಸಿದನು. ಯೊಪ್ಪದಲ್ಲಿಯ ಕೆಲವು ಸಹೋದರರು ಅವನೊಂದಿಗೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಪೆದ್ರುನ್ ತೆಂಕಾ ಭುತ್ತುರ್ ಬಲ್ವುನ್, ತ್ಯಾ ರಾತ್ತಿನಿ ಥೈಚ್ ರಾವ್ಚೆ ಮನುನ್ ಮಾಗುನ್ ಘೆಟ್ಲ್ಯಾನ್, ದುಸ್ರ್ಯಾಂದಿಸಿ ಪೆದ್ರು ತಯಾರ್ ಹೊವ್ನ್ ತ್ಯಾ ತಿನ್ ಮಾನ್ಸಾಂಚ್ಯಾ ವಾಂಗ್ಡಾ ಜಾವ್ಕಲಾಲೊ, ಜೊಪ್ಪಾತ್ಲೆ ದೆವಾಚ್ಯಾ ತಾಂಡ್ಯಾಚ್ಯಾ ಲೊಕಾತ್ನಿ ಥೊಡಿ ಲೊಕಾ ತೆಂಚ್ಯಾ ವಾಂಗ್ಡಾ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:23
16 ತಿಳಿವುಗಳ ಹೋಲಿಕೆ  

ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.


ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,


ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.


ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಯಾಕೆಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡುವುದು ನಮ್ಮ ಉದ್ದೇಶ.


ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು.


ಆದಕಾರಣ ನೀವು ನನ್ನನ್ನು ಕರೆಕಳುಹಿಸಿದಾಗ ನಾನು ಯಾವ ಎದುರುಮಾತನ್ನೂ ಆಡದೆ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನನಗೆ ತಿಳಿಸಬೇಕು” ಎಂದು ಕೇಳಿದನು.


ಈ ಸಂಗತಿಯು ಯೊಪ್ಪದಲ್ಲೆಲ್ಲಾ ಹರಡಿ ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.


ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ, “ತಡಮಾಡದೆ ನಮ್ಮ ಹತ್ತಿರಕ್ಕೆ ಬರಬೇಕೆಂದು” ಬೇಡಿಕೊಂಡರು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.


ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು