Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮರುದಿವಸ ಅವನು ಸೆಜರೇಯವನ್ನು ತಲುಪಿದನು. ಇತ್ತ ಕೊರ್ನೇಲಿಯನು ತಾನು ಆಹ್ವಾನಿಸಿದ ನೆಂಟರಿಷ್ಟರೊಡನೆ ಮತ್ತು ಆಪ್ತಮಿತ್ರರೊಡನೆ ಪೇತ್ರನಿಗಾಗಿ ಕಾಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮರುದಿನ ಅವನು ಕೈಸರೈಯಕ್ಕೆ ಸೇರಿದನು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಪ್ರಾಣವಿುತ್ರರನ್ನೂ ಕೂಡ ಕರಿಸಿ ಪೇತ್ರನನ್ನು ಎದುರುನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮರುದಿನ ಅವರು ಸೆಜರೇಯ ಪಟ್ಟಣವನ್ನು ತಲುಪಿದರು. ಕೊರ್ನೇಲಿಯನು ಅವರಿಗೋಸ್ಕರ ಕಾಯುತ್ತಿದ್ದನು. ಅವನು ತನ್ನ ಸಂಬಂಧಿಕರನ್ನು ಮತ್ತು ಆಪ್ತಸ್ನೇಹಿತರನ್ನು ಆಗಲೇ ತನ್ನ ಮನೆಗೆ ಆಹ್ವಾನಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮರುದಿನ ಅವನು ಕೈಸರೈಯವನ್ನು ತಲುಪಿದನು ಮತ್ತು ಕೊರ್ನೇಲ್ಯನು ಅವರಿಗಾಗಿ ಕಾಯುತ್ತಿದ್ದನು. ತನ್ನ ಬಂಧುಗಳನ್ನು ಹತ್ತಿರದ ಸ್ನೇಹಿತರನ್ನು ಕರೆಯಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ದುಸ್ರ್ಯಾಂದಿಸಿ ತೆನಿ ಸೆಜಾರೆಯ್ ಮನ್ತಲ್ಯಾ ಶಾರಾಕ್ ಪಾವ್ಲೆ ಕೊರ್ನೆಲ್ ತೆಂಚ್ಯಾಸಾಟ್ನಿ ರಾಕುನ್ಗೆತ್ ಹೊತ್ತೊ, ತೆನಿ ಅಪ್ಲ್ಯಾ ಬಳ್ಗಾಚ್ಯಾ ಲೊಕಾಕ್ನಿ ಅನಿ ಜಗೊಳ್ಲ್ಯಾ ವಾಂಗ್ಡಿಯಾಕ್ನಿ ತನ್ನಾಚ್ ಅಪ್ಲ್ಯಾ ಘರಾಕ್ ಬಲ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:24
14 ತಿಳಿವುಗಳ ಹೋಲಿಕೆ  

ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.


ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.


“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’”


ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.


ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.


ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.


ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.


ಅವನ ಸಂಗಡ ಸಂಭಾಷಣೆಮಾಡುತ್ತಾ ಮನೆಯೊಳಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು