ಅಪೊಸ್ತಲರ ಕೃತ್ಯಗಳು 10:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ನಜರೆತಾಚ್ಯಾ ಜೆಜುಚ್ಯಾ ವಿಶಯಾತ್ ತುಮ್ಕಾ ಗೊತ್ತ್ ಹಾಯ್, ದೆವಾನ್ ತೆಕಾ ಪವಿತ್ರ್ ಆತ್ಮೊ ಅನಿ ಬಳ್ ದಿವ್ನ್ ಅಭಿಶೆಕ್ ಕರ್‍ಲ್ಯಾನ್, ತೆನಿ ಸಗ್ಳ್ಯಾಕ್ಡೆ ಲೊಕಾಕ್ನಿ ಬರೆ ಕರ್‍ಲ್ಯಾನ್, ಅನಿ ಮ್ಹಾರು ಧರಲ್ಯಾಕ್ನಿ ಜೆಜುನ್ ಗುನ್ ಕರ್‍ಲ್ಯಾನ್, ಕಶ್ಯಾಕ್ ಮಟ್ಲ್ಯಾರ್, ಜೆಜುಚ್ಯಾ ವಾಂಗ್ಡಾ ದೆವ್ ಹಾಯ್ ಮನ್ತಲೆ ಹೆಚ್ಯಾ ವೈನಾ ದಿಸುನ್ ಯೆಲೆ. ಅಧ್ಯಾಯವನ್ನು ನೋಡಿ |