ಅಪೊಸ್ತಲರ ಕೃತ್ಯಗಳು 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ - ಏನು ಸ್ವಾಮೀ ಎಂದು ಕೇಳಲು ದೂತನು ಅವನಿಗೆ - ನಿನ್ನ ಪ್ರಾರ್ಥನೆಗಳೂ ನಿನ್ನ ದಾನಧರ್ಮಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಏರಿ ಬಂದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತನ್ನಾ ಕೊರ್ನೆಲಾನ್ ದೆವಾಚ್ಯಾ ದುತಾಕ್ ಬಗುನ್ ಭಿಂವ್ನ್ ಸಾಯ್ಬಾ ತುಕಾ ಕಾಯ್ ಹೊವ್ಚೆ? ಮನುನ್ ಇಚಾರ್‍ಲ್ಯಾನ್, ತೆಕಾ “ದೆವಾನ್ ತುಜಿ ಮಾಗ್ನಿಯಾ ಆಯಿಕ್ಲ್ಯಾನ್, ತಿಯಾ ಗರಿಬಾಕ್ನಿ ದಾನ್ ಧರ್ಮ್ ದಿಲ್ಲೆ ಸಗ್ಳ್ಯೆ ತೆನಿ ಬಗ್ಲಾ, ದೆವಾನ್ ತುಕಾ ಮೆಚ್ಚುನ್ ಘೆಟ್ಲಾ. ಅಧ್ಯಾಯವನ್ನು ನೋಡಿ |