ಅಪೊಸ್ತಲರ ಕೃತ್ಯಗಳು 10:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿಹೇಳಿದ್ದಾರೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ಜೆಜುಚ್ಯಾ ವರ್ತಿ ವಿಶ್ವಾಸ್ ಥವ್ತಲ್ಯಾ ಹರ್ ಎಕ್ಲ್ಯಾಚೊ ಪಾಪ್ ಬಿ ದೆವ್ ಜೆಜುಕ್ನಾ ಮಾಪ್ ಕರ್‍ತಾ, ಹೆ ಖರೆ ಮನುನ್ ಪ್ರವಾದ್ಯಾನಿ ಸಾಂಗ್ಲಾತ್, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.