Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದೇನೆಂದು ತಿಳಿದುಕೊಳ್ಳುವುದಕ್ಕೆ ನಾನು ಅದನ್ನು ಚೆನ್ನಾಗಿ ನೋಡಿದಾಗ, ಭೂಮಿಯ ಮೇಲಿರುವ ಎಲ್ಲಾ ಪ್ರಾಣಿಗಳು, ಕಾಡುಮೃಗಳು, ಹರಿದಾಡುವ ಕ್ರಿಮಿಕೀಟಗಳನ್ನೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳನ್ನೂ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದನ್ನು ಗಮನಿಸಿ ನೋಡಿದಾಗ ಅದರಲ್ಲಿ ಪ್ರಾಣಿಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಕಂಡುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೋಡಿದಾಗ ನೆಲದ ಮೇಲೆ ತಿರುಗಾಡುವ ಪಶು ಮೃಗ ಕ್ರಿವಿುಕೀಟಗಳನ್ನೂ ಅಂತರಿಕ್ಷದಲ್ಲಿ ಹಾರಾಡುವ ಹಕ್ಕಿಗಳನ್ನೂ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಅದರೊಳಗೆ ನೋಡಿದೆನು. ಅದರಲ್ಲಿ ಪಶುಗಳೂ ಕ್ರೂರಪ್ರಾಣಿಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಅದರೊಳಗೆ ನೋಡಲು ಅದರಲ್ಲಿ ಭೂಲೋಕದ ಮೇಲೆ ತಿರುಗಾಡುವ ಪ್ರಾಣಿಗಳೂ ಕಾಡು ಮೃಗಗಳೂ ಕ್ರಿಮಿಕೀಟಗಳೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳೂ ಇದ್ದುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತಾತ್ಯುರ್ ಜಿಮ್ನಿ ವೈಲಿ ಚಾರ್ ಪಾಯಾಂಚಿ ಜನಾವರಾ ಭಯಾನಕ್ ಜನಾವರಾ, ಪೊಟಾನ್ ಫಿರ್ತಲೆ ಕಿಡೆ ಅನಿ ಫಾಂಕ್ರಾಬಿ ಹೊತ್ತಿ ಮಿಯಾ ಬಗಟ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:6
6 ತಿಳಿವುಗಳ ಹೋಲಿಕೆ  

ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ,


ಪೇತ್ರ, ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು ಅವನಿಗೆ “ನಮ್ಮನ್ನು ನೋಡು” ಅಂದನು.


ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.


ಅದರೊಳಗೆ ಸಕಲ ವಿಧವಾದ ಪಶುಗಳೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳೂ ಇದ್ದವು.


ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.


ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು