Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ನಾನು; “ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ನಾನು, ‘ಬೇಡವೇ ಬೇಡ ಸ್ವಾಮಿ, ಅಶುದ್ಧ ಹಾಗು ಅಸ್ಪೃಶ್ಯವಾದುದು ಯಾವುದೂ ನನ್ನ ಬಾಯನ್ನು ಎಂದೂ ಹೊಕ್ಕಿಲ್ಲ,’ ಎಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು - ಬೇಡವೇ ಬೇಡ, ಸ್ವಾಮೀ, ಹೊಲೆಯಾದ ಪದಾರ್ಥವಾಗಲಿ ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಆದರೆ ನಾನು, ‘ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದ ಮತ್ತು ಅಶುದ್ಧವಾದ ಏನನ್ನಾಗಲಿ ನಾನೆಂದೂ ತಿಂದಿಲ್ಲ’ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಅದಕ್ಕೆ ನಾನು, ‘ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,’ ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಮಿಯಾ, ಧನಿಯಾ ಮಿಯಾ ತಸೊ ಕರಿನಾ! ಭ್ರಸ್ಟ್ ಅನಿ ಅಶುದ್ದ್ ಹೊತ್ತೆ ಕಾಯ್ಬಿ ಮಿಯಾ ಖಾಯ್ನಾ ಮನುನ್ ಸಾಂಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:8
9 ತಿಳಿವುಗಳ ಹೋಲಿಕೆ  

ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.


ಯಾಕೆಂದರೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯ ನಿಮಿತ್ತ ಪವಿತ್ರನಾದನು ಮತ್ತು ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನ ನಿಮಿತ್ತ ಪವಿತ್ರಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ಪವಿತ್ರರೇ ಆಗಿದ್ದಾರೆ.


ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.


ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.


ಇದರಿಂದ ಶುದ್ಧ ಹಾಗು ಅಶುದ್ಧಗಳನ್ನು, ತಿನ್ನಬಹುದಾದ ಜೀವಿಗಳು ಮತ್ತು ತಿನ್ನಬಾರದಾದ ಜೀವಿಗಳ ಕುರಿತು ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು.’”


ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು, ಶುದ್ಧವಾದವುಗಳನ್ನು, ಅಶುದ್ಧವಾದವುಗಳನ್ನು ವಿವೇಚಿಸುವುದೂ,


ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು.


ಅದಕ್ಕೆ; “ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು” ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು