ಅಪೊಸ್ತಲರ ಕೃತ್ಯಗಳು 12:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿದರು. ಪಟ್ಟಣದ ಕಡೆಯಿದ್ದ ಕಬ್ಬಿಣದ ದ್ವಾರದ ಬಳಿ ಬಂದರು. ಆ ದ್ವಾರ ತನ್ನಷ್ಟಕ್ಕೆ ತಾನೇ ತೆರೆಯಿತು. ಅವರು ಹೊರ ನಡೆದರು. ಬೀದಿಯೊಂದರಲ್ಲಿ ಹಾದುಹೋಗುತ್ತಿರಲು ಒಮ್ಮೆಲೆ ದೂತನು ಪೇತ್ರನನ್ನು ಬಿಟ್ಟು ಅದೃಶ್ಯನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪೇತ್ರನು ಮತ್ತು ದೇವದೂತನು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿಹೋದರು. ಬಳಿಕ ಅವರು ತಮ್ಮನ್ನು ಪಟ್ಟಣದತ್ತ ನಡೆಸುವ ಕಬ್ಬಿಣದ ಬಾಗಿಲಿಗೆ ಬಂದರು. ಆ ಬಾಗಿಲು ಅವರಿಗಾಗಿ ತನ್ನಷ್ಟಕ್ಕೆ ತಾನೇ ತೆರೆದುಕೊಂಡಿತು. ಪೇತ್ರ ಮತ್ತು ಆ ದೇವದೂತನು ಬಾಗಿಲ ಮೂಲಕ ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು. ಆಗ ಇದ್ದಕ್ಕಿದ್ದಂತೆ ಆ ದೇವದೂತನು ಅವನನ್ನು ಬಿಟ್ಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣದೊಳಗೆ ನಡೆಸುವ ಕಬ್ಬಿಣದ ದ್ವಾರಕ್ಕೆ ಅವರು ಬಂದರು. ಅದು ತನ್ನಷ್ಟಕ್ಕೆ ತಾನೇ ತೆರೆಯಲು ಅವರು ಅದನ್ನು ದಾಟಿ ಹೊರಗೆ ಬಂದರು. ಒಂದು ಬೀದಿಯನ್ನು ದಾಟುವವರೆಗೆ ನಡೆದು ಬಂದ ನಂತರ ಫಕ್ಕನೆ ದೇವದೂತನು ಪೇತ್ರನನ್ನು ಬಿಟ್ಟುಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ದೆವಾಚೊ ದುತ್ ಅನಿ ಪೆದ್ರುನ್ ಅದ್ದಿಚಿ ಅನಿ ದೊನ್ವೆಚಿ ರಾಕ್ವನ್ ಹೊತ್ತೆ ಜಾಗೆ ದಾಟ್ಲ್ಯಾನಿ, ಮಾನಾ ತೆನಿ ಅಪ್ಲ್ಯಾ ಗಾಂವಾಕ್ಡೆ ಜಾತಲ್ಯಾ ಲೊಂಗ್ಟಾಂಚ್ಯಾ ದಾರಾಕ್ಡೆ ಯೆಲೆ, ತೆ ದಾರ್ ಅಪ್ಲ್ಯಾ ಯೆವ್ಡ್ಯಾಕುಚ್ ಅಪ್ನಿ ಉಗಡ್ಲೆ ಪೆದ್ರು ಅನಿ ದೆವಾಚೊ ದುತ್ ತ್ಯಾ ದಾರಾನಿ ಭಾಯ್ರ್ ಯೆವ್ನ್ ಉಲ್ಲೆ ದುರ್ ಗೆಲ್ಲ್ಯಾ ತನ್ನಾ ದೆವ್ ದುತ್ ಪೆದ್ರುಕ್ ಸೊಡುನ್ ಗೆಲೊ. ಅಧ್ಯಾಯವನ್ನು ನೋಡಿ |