ಅಪೊಸ್ತಲರ ಕೃತ್ಯಗಳು 12:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಡೆದ ಸಂಗತಿ ಏನೆಂದು ಪೇತ್ರನಿಗೆ ಅರಿವಾದಾಗ ಆತನು, “ನಡೆದುದೆಲ್ಲಾ ಸಾಕ್ಷಾತ್ ಸತ್ಯವೆಂದು ಈಗ ನನಗೆ ತಿಳಿಯಿತು. ಪ್ರಭು ತಮ್ಮ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯರು ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಪಾರುಮಾಡಿದ್ದಾರೆ,” ಎಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಪೇತ್ರನು ಎಚ್ಚರವಾಗಿ - ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿದುಬಂದಿದೆ ಅಂದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಡೆದ ಸಂಗತಿಯನ್ನು ಆಗ ಅರಿತುಕೊಂಡ ಪೇತ್ರನು, “ಪ್ರಭುವು ನನ್ನ ಬಳಿಗೆ ತನ್ನ ದೇವದೂತನನ್ನು ನಿಜವಾಗಿಯೂ ಕಳುಹಿಸಿದನೆಂದು ಈಗ ನನಗೆ ತಿಳಿಯಿತು. ಆತನು ನನ್ನನ್ನು ಹೆರೋದನ ಕೈಯಿಂದ ಪಾರುಮಾಡಿದನು. ನನಗೆ ಕೇಡು ಸಂಭವಿಸುತ್ತದೆಯೆಂದು ಯೆಹೂದ್ಯರು ಯೋಚಿಸಿಕೊಂಡಿದ್ದರು. ಆದರೆ ಪ್ರಭುವು ನನ್ನನ್ನು ಆ ಕೇಡಿನಿಂದ ರಕ್ಷಿಸಿದನು” ಎಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಪೇತ್ರನು ಸಂಪೂರ್ಣವಾಗಿ ಎಚ್ಚರಗೊಂಡು, “ಈಗ ಕರ್ತದೇವರು ತಮ್ಮ ದೂತನನ್ನು ಕಳುಹಿಸಿ ಹೆರೋದನ ಹಿಡಿತದಿಂದಲೂ ಯೆಹೂದ್ಯ ಜನರು ನಿರೀಕ್ಷಿಸುತ್ತಿದ್ದ ಎಲ್ಲಾ ಕೇಡಿನಿಂದಲೂ ನನ್ನನ್ನು ಉಳಿಸಿ ಕಾಪಾಡಿರುವರು ಎಂದು ಈಗ ನನಗೆ ಗೊತ್ತಾಗಿದೆ,” ಎಂದುಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಹೊಲ್ಲಿ ಸಂಗ್ತಿಯಾ ತನ್ನಾ ಪೆದ್ರುನ್ ಕಳ್ವುನ್ ಘೆವ್ನ್ “ಧನಿಯಾನ್ ದೆವಾಚ್ಯಾ ದುತಾಕ್ ಖರೆಬಿ ಮಾಜ್ಯಾಕ್ಡೆ ಧಾಡುನ್ ದಿಲ್ಯಾನ್ ಮನ್ತಲೆ ಮಾಕಾ ಅತ್ತಾ ಕಳ್ಳೆ, ತೆನಿ ಮಾಕಾ ಹೆರೊದ್ ರಾಜಾಚ್ಯಾ ಹಾತಿತ್ನಾ ಪಾರ್ ಕರ್‍ಲ್ಯಾನ್, ಜುದೆವಾಂಚ್ಯಾ ಲೊಕಾನಿ ಮಾಕಾ ಬುರ್ಶೆ ಹೊತಾ ಮನುನ್ ಚಿಂತಲ್ಯಾನಿ, ಖರೆ ಧನಿಯಾನ್ ಮಾಕಾ ತರಾಸಾತ್ನಾ ರಾಕ್ವನ್ ಕರ್‍ಲ್ಯಾನ್” ಮನುನ್ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿ |