Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೆರೋದನು ಟೈರ್ ಮತ್ತು ಸಿದೋನಿನ ಜನರ ಮೇಲೆ ಕಡುಕೋಪಗೊಂಡಿದ್ದನು. ಅವರೆಲ್ಲರೂ ಒಟ್ಟಾಗಿ ಅವನನ್ನು ಸಂದರ್ಶಿಸಲು ಹೋದರು. ಮೊದಲು ಅರಮನೆಯ ಮೇಲ್ವಿಚಾರಕನಾದ ಬ್ಲಾಸ್ತನ ಮನಸ್ಸನ್ನು ತಮ್ಮ ಕಡೆ ಒಲಿಸಿಕೊಂಡರು. ಅನಂತರ ಅವರು ಹೆರೋದನೊಡನೆ ಸಂಧಾನಮಾಡಿಕೊಳ್ಳಲು ಯತ್ನಿಸಿದರು. ಏಕೆಂದರೆ, ಅವರು ದವಸಧಾನ್ಯಗಳಿಗಾಗಿ ಹೆರೋದನ ನಾಡನ್ನು ಅವಲಂಬಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತೂರ್ ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವದನ್ನು ನೋಡಿ ಒಂದೇ ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಬೇಕೆಂದು ಅರಸನನ್ನು ಬೇಡಿಕೊಂಡರು. ಯಾಕಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಟೈರ್ ಮತ್ತು ಸಿದೋನ್ ಪಟ್ಟಣಗಳ ಜನರ ಮೇಲೆ ಹೆರೋದನು ಬಹು ಕೋಪಗೊಂಡಿದ್ದನು. ಆ ಜನರೆಲ್ಲರೂ ಹೆರೋದನನ್ನು ಭೇಟಿಯಾಗಲು ಒಟ್ಟಾಗಿ ಹೋದರು. ಅವರು ಬ್ಲಾಸ್ತನನ್ನು ತಮ್ಮ ಕಡೆಗೆ ಒಲಿಸಿಕೊಂಡರು. ಬ್ಲಾಸ್ತನು ರಾಜನ ವೈಯಕ್ತಿಕ ಸೇವಕನಾಗಿದ್ದನು. ಆ ಜನರು ತಮ್ಮೊಂದಿಗೆ ಶಾಂತಿಸಂಧಾನ ಮಾಡಿಕೊಳ್ಳಬೇಕೆಂದು ಹೆರೋದನನ್ನು ಕೇಳಿಕೊಂಡರು. ಯಾಕೆಂದರೆ ಅವರ ನಾಡಿಗೆ ಹೆರೋದನ ನಾಡಿನಿಂದ ಆಹಾರವನ್ನು ತರಿಸಿಕೊಳ್ಳಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತಿರ್ ಅನಿ ಸಿದೊನ್ ಮನ್ತಲ್ಯಾ ಶಾರಾಂತ್ಲಾ ಲೊಕಾಂಚೆರ್ ಹೆರೊದಾಕ್ ಲೈ ರಾಗ್ ಯೆಲ್ಲೊ, ತ್ಯಾ ಶಾರಾಂತ್ಲಿ ಲೊಕಾ ಹೆರೊದಾಕ್ ಲೆಕ್ ಭೆಟ್ವುಚೆ ಮನುನ್ ಗೊಳಾ ಹೊವ್ನ್ ಗೆಲಿ, ಅನಿ ಬ್ಲಾಸ್ತಾ ಮನ್ತಲ್ಯಾ ಹೆರೊದಾಚ್ಯಾ ವಯಕ್ತಿಕ್ ಸೆವಕಾಕ್ ಅಪ್ನಾಕ್ಡೆ ಕರುನ್ ಘೆಟ್ಲ್ಯಾನಿ, ತೆನಿ ಅಪ್ನಾಂಚ್ಯಾ ವಾಂಗ್ಡಾ ಹೆರೊದ್‍ರಾಜಾನ್ ಶಾಂತ್ಪಾನಾಚೊ ಕರಾರ್ ಕರುನ್ ಘೆವ್ಚೆ ಮನುನ್ ಸಾಂಗ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್, ತೆಂಚ್ಯಾ ಗಾಂವಾಕ್ನಿ ಹೆರೊದಾಚ್ಯಾ ಗಾಂವಾಕ್ನಾಚ್ ಜೆವ್ನಾಕ್ ಪಾಜೆ ಹೊಲ್ಲೆ ಸಗ್ಳೆ ಯೆಯ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:20
24 ತಿಳಿವುಗಳ ಹೋಲಿಕೆ  

ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.


“ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.


ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.


ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.


ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ಈಗ ನನ್ನ ಒಡೆಯನು ಹೇಳಿದ ಮೇರೆಗೆ ಆ ಗೋದಿಯನ್ನು, ಜವೆಗೋದಿಯನ್ನು, ಎಣ್ಣೆಯನ್ನು, ದ್ರಾಕ್ಷಾರಸವನ್ನು ತನ್ನ ಸೇವಕರಿಗೆ ಕಳುಹಿಸಿಕೊಡಲಿ.


ಮರ ಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು” ಎಂದನು.


ಅಲ್ಲಿಂದ ಅದು ತಿರುಗಿಕೊಂಡು ರಾಮ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರ ತೀರದಲ್ಲಿ ಕೊನೆಗೊಳ್ಳುತ್ತದೆ.


ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.


ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.


ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.


ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.


ನಾವು ತೂರ್ ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿನ ಇದ್ದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು