Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಿಯಮಿತ ದಿನದಂದು ಹೆರೋದನು ರಾಜಪೋಷಾಕನ್ನು ಧರಿಸಿಕೊಂಡು ಜನರನ್ನುದ್ದೇಶಿಸಿ ಭಾಷಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ರಾಜಾಸನದ ಮೇಲೆ ಕೂತು ಅವರಿಗೆ ಉಪನ್ಯಾಸ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರನ್ನು ಸಂಧಿಸುವುದಕ್ಕಾಗಿ ಹೆರೋದನು ದಿನವೊಂದನ್ನು ಗೊತ್ತುಮಾಡಿದನು. ಅಂದು ಹೆರೋದನು ಸುಂದರವಾದ ರಾಜವಸ್ತ್ರವನ್ನು ಧರಿಸಿಕೊಂಡಿದ್ದನು. ಅವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಜನರಿಗೆ ಭಾಷಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೇಮಕವಾದ ದಿನ ಹೆರೋದನು ತನ್ನ ರಾಜವಸ್ತ್ರಗಳನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತುಕೊಂಡು ಜನರನ್ನುದ್ದೇಶಿಸಿ ಬಹಿರಂಗ ಭಾಷಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆಂಕಾ ಭೆಟುಕ್ ಮನುನ್ ಹೆರೊದ್ ರಾಜಾನ್ ಎಕ್‍ ದಿಸ್ ವಳಕ್ ಕರುನ್, ತ್ಯಾ ದಿಸಿ ತೆನಿ ಬರೆ ದಿಸ್ತಲೆ ರಾಜಾಚೆ ಕಪ್ಡೆ ನೆಸುನ್ ಘೆವ್ನ್ ಅಪ್ಲ್ಯಾ ಸಿವಾಸನಾರ್ ಬಸುನ್ ಲೊಕಾಕ್ನಿ ಭಾಶಾನ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:21
10 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.


ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.


ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು.


ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು.


ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.


ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.


ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು.


ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲಾ.


ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.


ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು