Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಡೆದುದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ವಿಶ್ವಾಸಿಸಿದನು; ಅವರನ್ನು ಕುರಿತ ಬೋಧನೆಯನ್ನು ಕೇಳಿ ವಿಸ್ಮಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ನಂಬಿಕೊಂಡನು. ಪ್ರಭುವಿನ ವಿಷಯವಾದ ಉಪದೇಶವನ್ನು ಕೇಳಿ ವಿಸ್ಮಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಂಭವಿಸಿದ್ದೆಲ್ಲವನ್ನೂ ರಾಜ್ಯಪಾಲನು ಕಂಡು, ಕರ್ತ ಯೇಸುವಿನ ವಿಷಯವಾಗಿದ್ದ ಬೋಧನೆಯ ಬಗ್ಗೆ ಆಶ್ಚರ್ಯಪಟ್ಟು ವಿಶ್ವಾಸವನ್ನಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆ ಬಗಲ್ಯಾ ರಾಜ್ ಪಾಲಾನ್ ಧನಿಯಾಚೆರ್ ವಿಶ್ವಾಸ್ ಕರ್‍ಲ್ಯಾನ್, ಅನಿ ತೊ ಧನಿಯಾಚ್ಯಾ ವಿಶಯಾಚೆ ಶಿಕಾಪ್ ಆಯ್ಕುನ್ ವಿಸ್ಮಿತ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:12
20 ತಿಳಿವುಗಳ ಹೋಲಿಕೆ  

ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು.


ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.


ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಸಮೀಪದಲ್ಲಿ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.


ಅಲ್ಲಿ ಸುಮಾರು ಹನ್ನೆರಡು ಮಂದಿ ಗಂಡಸರಿದ್ದರು.


ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.


ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು.


ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.


ಕಾವಲುಗಾರರು “ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ” ಎಂದು ಉತ್ತರ ಕೊಟ್ಟರು.


ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.


ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.


ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.


ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.


ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.


ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;


ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.


ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.


ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಅಕ್ಕಸಾಲಿಗರಿಗೂ ಯಾವನ ಮೇಲಾದರೂ ದೂರುಗಳಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು