Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಪೌಲನು ಎದ್ದು ನಿಂತು ಜನರಿಗೆ ನಿಶ್ಯಬ್ದವಾಗಿರುವಂತೆ ಕೈಸನ್ನೆ ಮಾಡಿ, ಹೀಗೆಂದು ಉಪದೇಶ ಮಾಡಲಾರಂಭಿಸಿದನು: “ಇಸ್ರಯೇಲ್ ಬಾಂಧವರೇ, ಹಾಗು ನಿಜದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪೌಲನು ಎದ್ದುನಿಂತುಕೊಂಡು ತನ್ನ ಮಾತುಗಳನ್ನು ಕೇಳಬೇಕೆಂದು ಜನರಿಗೆ ಕೈಸನ್ನೆ ಮಾಡಿ ಹೀಗೆಂದನು: “ನನ್ನ ಯೆಹೂದ್ಯ ಸಹೋದರರೇ, ನಿಜ ದೇವರನ್ನು ಆರಾಧಿಸುವ ಇತರ ಜನರೇ, ದಯವಿಟ್ಟು ನನಗೆ ಕಿವಿಗೊಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಪೌಲನು ಎದ್ದು ನಿಂತು, ಕೈಸನ್ನೆ ಮಾಡಿ ಹೀಗೆ ಹೇಳಿದನು: “ಇಸ್ರಾಯೇಲ್ ಜನರೇ, ದೇವರಲ್ಲಿ ಭಯಭಕ್ತಿಯುಳ್ಳವರೇ, ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಪಾವ್ಲುನ್ ಇಬೆ ರ್‍ಹಾವ್ನ್ ಅಪ್ಲಿ ಬೊಲ್ನಿಯಾ ಸಾಂಗುಚೆ ಮನುನ್ ಲೊಕಾಕ್ನಿ ಹಾತ್ ಸೊನ್ನಿ ಕರುನ್ ದಾಕ್ವುನ್ ಅಶೆ ಮಟ್ಲ್ಯಾನ್ “ಮಾಜ್ಯಾ ಇಸ್ರಾಯೆಲಾಚ್ಯಾ ಲೊಕಾನು, ಜುದೆವಾನು, ಅನಿ ಖರ್ಯ್ಯಾ ದೆವಾಕ್ ಆರಾದನ್ ಕರ್‍ತಲ್ಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನು, ಮಿಯಾ ಸಾಂಗ್ತಲೆ ಆಯ್ಕಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:16
29 ತಿಳಿವುಗಳ ಹೋಲಿಕೆ  

ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.


ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.


ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.


ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಭಿಸಿದನು.,


ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.


ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.


“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.


ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.


ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.


ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ.


ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.


ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.


ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವರು.


ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ?


ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು