Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೊವಾನ್ನನು ತನ್ನ ನಿಯೋಗವನ್ನು ಪೂರೈಸುತ್ತಿದ್ದಂತೆ ಜನರಿಗೆ, ‘ನಾನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ವ್ಯಕ್ತಿ ನಾನಲ್ಲ. ನನ್ನ ಅನಂತರ ಒಬ್ಬರು ಬರುವರು; ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ - ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ‘ನಾನು ಯಾರೆಂದು ನೀವು ಯೋಚಿಸುತ್ತೀರಿ? ನಾನು ಕ್ರಿಸ್ತನಲ್ಲ. ಆತನು ನನ್ನ ತರುವಾಯ ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ’ ಎಂದು ಯೋಹಾನನು ತನ್ನ ಕಾರ್ಯವನ್ನು ಮಾಡಿ ಪೂರೈಸುತ್ತಿದ್ದಾಗ ಹೇಳಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ, ‘ನನ್ನನ್ನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ಅವರು ನಾನಲ್ಲ, ಇಗೋ, ಅವರು ನನ್ನ ನಂತರ ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಹಿ ಕಾಮಾ ಸಾರ್ತಾನಾ ಜುವಾಂವಾನ್ ಲೊಕಾಕ್ನಿ “ಮಿಯಾ ಕೊನ್ ಮನುನ್ ತುಮಿ ಯೆವಜ್ತ್ಯಾಸಿ ಮಿಯಾ ಕ್ರಿಸ್ತ್ ನ್ಹಯ್ ಮಾಜ್ಯಾ ಮಾನಾ ತೊ ಯೆತಲೊ ಹಾಯ್ ಮಿಯಾ ತೆಚ್ಯಾ ಪಾಯಾತ್ಲಿ ವ್ಹಾನಾಯ್ಯಾ ಕಾಡುಕ್‍ಬಿ ಯೊಗ್ಯ್ ನಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:25
19 ತಿಳಿವುಗಳ ಹೋಲಿಕೆ  

ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.


ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.


ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.


ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.


ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.


ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,


“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.


ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.


ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.


ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು