Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಹೊಂದಲಾಗದ ಎಲ್ಲಾ ಪಾಪಗಳಿಂದ ನಂಬುವವರೆಲ್ಲರು ಆತನ ಮೂಲಕವಾಗಿ ಬಿಡುಗಡೆ ಹೊಂದಿ ನೀತಿವಂತರೆನಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಮೋಶೆಯ ನಿಯಮದ ಮೂಲಕವಾಗಿ ನೀತಿವಂತರೆಂದು ನಿರ್ಣಯಿಸಲಾಗದ ಎಲ್ಲಾ ಪಾಪಗಳಿಂದ ಬಿಡುಗಡೆಯಾಗಿ, ಯೇಸುವನ್ನು ನಂಬುವ ಪ್ರತಿಯೊಬ್ಬರೂ ಯೇಸುವಿನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತೆಜ್ಯಾಕ್ನಾಚ್ ವಿಶ್ವಾಸ್ ಕರಲ್ಯಾ ಹರ್ ಎಕ್ಲ್ಯಾಕ್ನಿ ಪಾಪಾಕ್ನಾ ಸುಟ್ಕಾ ಅನಿ ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ವೈನಾ ಚುಕ್ದಾರಿ ಮನುನ್ ಸಾಂಗುಕ್ ಹೊಯ್ ನಸಲ್ಯಾ ಸಾರ್ಕೆ ಚುಕೆತ್ನಾ, ಸುಟ್ಕಾ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:39
40 ತಿಳಿವುಗಳ ಹೋಲಿಕೆ  

ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.


ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.


ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,


ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.


ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.


ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.


ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.


ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.


ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?


ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.


ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ.


ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.


ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು.


ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,


ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.


ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು