Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆದರೆ ಜನರು ಗುಂಪುಗುಂಪಾಗಿ ಬರುವದನ್ನು ನೋಡಿ ಯೆಹೂದ್ಯರು ಮತಾಭಿಮಾನದಿಂದ ತುಂಬಿದವರಾಗಿ ಪೌಲನು ಹೇಳಿದ ಮಾತುಗಳಿಗೆ ಎದುರ್ಚಂಡಿಸುತ್ತಾ ದೂಷಣೆ ಮಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಹೆ ಬಗಲ್ಯಾ ಜುದೆವಾಂಚ್ಯಾ ಲೊಕಾಕ್ನಿ ಲೈ ಕುಶ್ಡೆಪಾನ್ ಹೊಲೆ ತೆನಿ ಪಾವ್ಲುಚಿ ಬೊಲ್ನಿಯಾ ಆಯ್ಕುನ್ ಗಾಳಿಯಾ ದಿಲ್ಯಾನಿ ಅನಿ ವಿರೊದ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:45
27 ತಿಳಿವುಗಳ ಹೋಲಿಕೆ  

ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.


ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.


ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.


ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,


ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.


ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?


ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.


ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?


ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.


ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.


ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.


ಆದರೆ ನಂಬದೆ ಹೋದ ಯೆಹೂದ್ಯರು, ಅನ್ಯಜನರ ಮನಸ್ಸನ್ನು ಈ ಸಹೋದರರ ವಿರುದ್ಧವಾಗಿ ಪ್ರಚೋದಿಸಿ ಕೆಡಿಸಿದರು.


ಆಗ ಆ ಊರಿನ ಜನರು ಎರಡು ಭಾಗವಾದರೂ; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.


ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,


ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.


ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, ಸ್ವಂತ ಜನರಿಂದ ಅಪಾಯಗಳೂ, ಅನ್ಯಜನರಿಂದ ಅಪಾಯಗಳೂ, ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು.


ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು