Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತಾಡಿ - ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪುಮಾಡಿಕೊಂಡದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಖರೆ ಪಾವ್ಲುನ್ ಅನಿ ಬಾರ್ನಾಬಾನ್ ಧೈರೊ ಘೆವ್ನ್ ಬೊಲುನ್ ಆಮಿ ತುಮ್ಚ್ಯಾ ವಾಂಗ್ಡಾ ಅದ್ದಿಚ್ ದೆವಾಚಿ ಗೊಸ್ಟಿಯಾ ಬೊಲ್ಲ್ಯಾಂವ್, ಖರೆ ತುಮಿ ತೆ ಆಯ್ಕಿನಸ್ತಾನಾ ನಾಸ್ ಹೊಯ್ ನಸಲ್ಲ್ಯಾ ಜಿವಾಕ್ನಾ ಧುರ್ ಹೊಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:46
37 ತಿಳಿವುಗಳ ಹೋಲಿಕೆ  

“ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.


ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.


ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು.


ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.


ಆದರೆ ಆತನು; ‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’” ಹೇಳಿದನು.


“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.


ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ.


ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.


“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.


ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.


ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.


ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.


ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.


ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.


ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.


ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.


ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.”


ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.


ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.


ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು