Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಇದಕ್ಕೆ ಪ್ರತಿಯಾಗಿ ಪ್ರೇಷಿತರು ತಮ್ಮ ಪಾದಧೂಳನ್ನು ಝಾಡಿಸಿ ಇಕೋನಿಯಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಇವರು ತಮ್ಮ ಕಾಲಿಗೆ ಹತ್ತಿದ್ದ ದೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಆದ್ದರಿಂದ ಪೌಲ ಬಾರ್ನಬರು ಅವರ ವಿರೋಧವಾಗಿ ತಮ್ಮ ಕಾಲಿನ ಧೂಳನ್ನು ಝಾಡಿಸಿ, ಇಕೋನಿಯಾ ಪಟ್ಟಣಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಆಗ ಅವರಿಗೆ ವಿರೋಧವಾಗಿ ಪೌಲ, ಬಾರ್ನಬರು ತಮ್ಮ ಪಾದದ ಧೂಳನ್ನು ಝಾಡಿಸಿ ಇಕೋನ್ಯಕ್ಕೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ತಸೆ ಹೊವ್ನ್ ಪಾವ್ಲುನ್ ಅನಿ ಬಾರ್ನಾಬಾನ್ ತೆಂಕಾ ಎಕ್ ಹುಶ್ಯಾರ್ಕಿ ಹೊಂವ್ದಿ ಮನುನ್ ಅಪ್ಲ್ಯಾ ಪಾಂಯಾಕ್ನಿ ಲಾಗಲಿ ಧುಳ್ ಫಾಪ್ಡುನ್ ಟಾಕುನ್ ಇಕೊನಿಯಾಕ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:51
10 ತಿಳಿವುಗಳ ಹೋಲಿಕೆ  

ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.


ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,


ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು.


ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.


ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.


ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.


ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು.


ಅವನು ಲುಸ್ತ್ರದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು.


ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು.


‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು