ಅಪೊಸ್ತಲರ ಕೃತ್ಯಗಳು 14:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಕೋನಿಯದಲ್ಲೂ ಪೌಲ ಮತ್ತು ಬಾರ್ನಬ ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು. ಅವರ ಅಮೋಘ ಬೋಧನೆಯನ್ನು ಕೇಳಿ ಯೆಹೂದ್ಯರು ಮತ್ತು ಗ್ರೀಕರು ಬಹುಸಂಖ್ಯೆಯಲ್ಲಿ ಭಕ್ತವಿಶ್ವಾಸಿಗಳಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಕೋನ್ಯದಲ್ಲಿ ಪೌಲ ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಬಲವಾಗಿ ಮಾತಾಡಿದ್ದರಿಂದ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ಬಹುಮಂದಿ ನಂಬುವವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪೌಲ ಬಾರ್ನಬರು ಇಕೋನಿಯಾ ಪಟ್ಟಣಕ್ಕೆ ಹೋದರು. (ಪ್ರತಿಯೊಂದು ಪಟ್ಟಣದಲ್ಲಿಯೂ ಅವರು ಮಾಡುತ್ತಿದ್ದಂತೆ) ಇಲ್ಲಿಯೂ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಜನರಿಗೆ ಬೋಧಿಸಿದರು. ಪೌಲ ಬಾರ್ನಬರ ಅಮೋಘ ಬೋಧನೆಯನ್ನು ಕೇಳಿ ಅನೇಕ ಯೆಹೂದ್ಯರು ಮತ್ತು ಗ್ರೀಕರು ನಂಬಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಕೋನ್ಯದಲ್ಲಿಯೂ ಪೌಲ ಮತ್ತು ಬಾರ್ನಬರು ವಾಡಿಕೆಯಂತೆ ಯೆಹೂದ್ಯರ ಸಭಾಮಂದಿರಕ್ಕೆ ಹೋದರು. ಅವರು ಅಲ್ಲಿ ಪರಿಣಾಮಕಾರಿಯಾಗಿ ಮಾತನಾಡಿದ್ದರಿಂದ ಬಹು ಸಂಖ್ಯೆಯಲ್ಲಿ ಯೆಹೂದ್ಯರೂ ಗ್ರೀಕರೂ ವಿಶ್ವಾಸವನ್ನಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಪಾವ್ಲು ಅನಿ ಬಾರ್ನಾಬಾಸ್ ಇಕೊನಿಯಾ ಮನ್ತಲ್ಯಾ ಶಾರಾಕ್ ಗೆಲೆ, ಹರ್ ಎಕ್ ಶಾರಾತ್ ತೆನಿ ಕರಲ್ಯಾ ಸಾರ್ಕೆಚ್ ಹಿತ್ತೆಬಿ ಜುದೆವಾಂಚ್ಯಾ ಸಿನಾಗೊತ್ ಜಾವ್ನ್ ದೆವಾಚ್ಯಾ ವಿಶಯಾತ್ ಬೊಲ್ಯಾನಿ, ಪಾವ್ಲುಚೆ ಅನಿ ಬಾರ್ನಾಬಾಸಾಚಿ ಶಿಕಾಪಾ ಆಯ್ಕುನ್ ಜುದೆವಾಂಚ್ಯಾ ಅನಿ ಗ್ರಿಕಾಂಚ್ಯಾ ಲೈ ಲೊಕಾನಿ ದೆವಾಚೆರ್ ವಿಶ್ವಾಸ್ ಥವ್ಲ್ಯಾನಿ. ಅಧ್ಯಾಯವನ್ನು ನೋಡಿ |