Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ಜನರ ಗುಂಪಿನೊಳಗೆ ನುಗ್ಗಿ ಹೀಗೆಂದು ಕೂಗಿ ಹೇಳಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದನ್ನು ಕೇಳಿದ ಬಾರ್ನಬ ಮತ್ತು ಪೌಲರು ಸಿಟ್ಟಿನಿಂದ ತಮ್ಮ ಮೇಲಂಗಿಗಳನ್ನು ಹರಿದು, ಜನಸಂದಣಿಯತ್ತ ಧಾವಿಸಿ ಹೀಗೆಂದು ಕೂಗಿಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇದನ್ನು ಕೇಳಿದ ಪೌಲ ಬಾರ್ನಬರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದೊಳಕ್ಕೆ ಓಡಿಹೋಗಿ ಹೀಗೆಂದು ಕೂಗಿ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ಇದನ್ನು ಕೇಳಿದಾಗ, ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದ ಕಡೆಗೆ ಓಡಿಬಂದು ಕೂಗಿ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಹೆ ಆಯ್ಕುಲ್ಯಾ ಬಾರ್ನಾಬಾಸ್ ಅನಿ ಪಾವ್ಲುನ್ ಅಪ್ಲಿ ಫಾಳಿಯಾ ಪಿಂಜುನ್ ಘೆವ್ನ್ ಲೊಕಾಂಚ್ಯಾ ತಾಂಡ್ಯಾತ್ ಪಳುನ್ ಜಾವ್ನ್, ಅಶೆ ಮನುನ್ ಬೊಬ್ ಮಾರ್‍ಲ್ಯಾನಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:14
11 ತಿಳಿವುಗಳ ಹೋಲಿಕೆ  

ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;


ಆಗ ಆ ಊರಿನ ಜನರು ಎರಡು ಭಾಗವಾದರೂ; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.


ಇದನ್ನು ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇನ್ನೂ ನಮಗೆ ಸಾಕ್ಷಿಗಳ ಅಗತ್ಯವೇನಿದೆ?


ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.


ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್ ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.


ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ನಾನು ಸ್ವತಂತ್ರನಲ್ಲವೋ? ನಾನು ಅಪೊಸ್ತಲನಲ್ಲವೋ? ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು