Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವುದಕ್ಕೆ ಬಿಟ್ಟು ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹಿಂದಿನ ಕಾಲದಲ್ಲಿ ಸಮಸ್ತ ಜನಾಂಗಗಳು ತಮಗೆ ಇಷ್ಟಬಂದಂತೆ ನಡೆಯಲೆಂದು ದೇವರು ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಹಿಂದಿನ ಕಾಲದಲ್ಲಿ ದೇವರು ಎಲ್ಲಾ ಜನಾಂಗಗಳನ್ನು ಅವುಗಳ ಇಷ್ಟಕ್ಕನುಸಾರವಾಗಿ ನಡೆಯಲು ಬಿಟ್ಟುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇವರು ಹಿಂದಿನ ಕಾಲದಲ್ಲಿ, ಆಯಾ ದೇಶಗಳು ತಮ್ಮ ತಮ್ಮ ಮಾರ್ಗಗಳಲ್ಲಿಯೇ ನಡೆಯುವಂತೆ ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಸರುನ್ ಗೆಲ್ಲ್ಯಾ ಯೆಳಾತ್ನಾ ಸಗ್ಳ್ಯಾ ಲೊಕಾಕ್ನಿ ದೆವಾನ್ ಅಪ್ಲ್ಯಾ ಇಚ್ಚ್ಯಾ ಸಾರ್ಕೆ ಚಲುಕ್ ಸೊಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:16
10 ತಿಳಿವುಗಳ ಹೋಲಿಕೆ  

ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.


ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.


ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.


ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!


ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತದವರೆಗೆ ನಡೆಯುವೆವು.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.


ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು