Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೆ, ಭಕ್ತವಿಶ್ವಾಸಿಗಳು ಬಂದು ಅವನ ಸುತ್ತಲೂ ನೆರೆದಿದ್ದಾಗ ಅವನು ಎದ್ದು ಪಟ್ಟಣವನ್ನು ಪ್ರವೇಶಿಸಿದನು. ಮರುದಿನ ಅವನು ಬಾರ್ನಬನ ಸಂಗಡ ದೆರ್ಬೆಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು. ಮರುದಿನ ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ, ಯೇಸುವಿನ ಶಿಷ್ಯರು ಅವನ ಸುತ್ತಲೂ ನೆರೆದು ಬಂದಾಗ ಅವನು ಎದ್ದು ಪಟ್ಟಣದೊಳಗೆ ಹೋದನು. ಮರುದಿನ ಅವನು ಮತ್ತು ಬಾರ್ನಬನು ದರ್ಬೆಪಟ್ಟಣಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಶಿಷ್ಯರು ಬಂದು ಪೌಲನ ಸುತ್ತಲೂ ನಿಂತುಕೊಳ್ಳಲು ಅವನು ಎದ್ದು ಪಟ್ಟಣಕ್ಕೆ ಹಿಂದಿರುಗಿ ಹೋದನು. ಮರುದಿನ ಅವನೂ ಬಾರ್ನಬನೂ ದೆರ್ಬೆಗೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ, ಜೆಜುಚಿ ಶಿಸಾ ಲೊಕಾ ತೆಚ್ಯಾ ಅಜುಭಾಜುನ್ ಗೊಳಾ ಹೊವ್ನ್ ಯೆಲ್ಲ್ಯಾ ತನ್ನಾ ತೊ ಉಟುನ್ ಶಾರಾತ್ ಗೆಲೊ, ದುಸ್ರೆಂದಿಸಿ ಪಾವ್ಲು ಅನಿ ಬಾರ್ನಾಬಾಸ್ ದರ್ಬೆ ಮನ್ತಲ್ಯಾ ಶಾರಾಕ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:20
13 ತಿಳಿವುಗಳ ಹೋಲಿಕೆ  

ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ,


ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.


ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.


ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,


ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.


ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಹೆಚ್ಚುಕಾಲ ತಂಗಿದ್ದರು.


ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು