Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆಜುಚ್ಯಾ ಶಿಸಾಕ್ನಿ ವಿಶ್ವಾಸಾತ್ ಬಳ್ ಹಾನುನ್ ಘಟ್ ಹೊವ್ನ್ ರ್‍ಹಾಯ್ ಸಾರ್ಕೆ ಉಮ್ಮೆದ್ ಭರ್‍ಲ್ಯಾನಿ, ಅನಿ ಅಮಿ ದೆವಾಚ್ಯಾ ರಾಜಾಕ್ ಜಾವ್ಚೆ ಹೊಲ್ಯಾರ್ ಲೈ ತರಾಸಾನಿ ಜಾವ್ಚೆ ಹೊತಾ ಮನುನ್ ಶಿಕಾಪಾ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:22
49 ತಿಳಿವುಗಳ ಹೋಲಿಕೆ  

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.


ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.


ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ.


ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.


ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.


ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು” ಎಂದು ಹೇಳಿದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.


ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.


ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.


ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು.


ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.


ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.


ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.


ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.


ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.


ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ.


ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.


“ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು.


“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.


ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.


ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.


ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು.


ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಹೆಚ್ಚುಕಾಲ ತಂಗಿದ್ದರು.


ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.


ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.


ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು