ಅಪೊಸ್ತಲರ ಕೃತ್ಯಗಳು 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪ್ರೇಷಿತರಿಬ್ಬರೂ ಅಲ್ಲಿ ಬಹುಕಾಲವಿದ್ದು ಪ್ರಭುವನ್ನು ಕುರಿತು ಧೈರ್ಯವಾಗಿ ಬೋಧಿಸಿದರು. ಪ್ರಭು ಅವರಿಗೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟರು. ಈ ಮೂಲಕ ದೇವಾನುಗ್ರಹದ ಬಗ್ಗೆ ಅವರ ಸಂದೇಶ ಸತ್ಯವಾದುದೆಂದು ವ್ಯಕ್ತಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೀಗಿರಲಾಗಿ ಪೌಲ ಬಾರ್ನಬರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಪೌಲ ಬಾರ್ನಬರು ಇಕೋನಿಯಾದಲ್ಲಿ ಬಹುಕಾಲವಿದ್ದು ಪ್ರಭುವಿನ ಕುರಿತು ಧೈರ್ಯದಿಂದ ಮಾತಾಡಿದರು. ಪ್ರಭುವು ಅವರ ಮೂಲಕ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡಿ ತನ್ನ ಕೃಪಾಸಂದೇಶವನ್ನು ನಿರೂಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ಪೌಲ ಬಾರ್ನಬರು ಅಲ್ಲಿ ಬಹಳ ಸಮಯವಿದ್ದು ಕರ್ತ ಯೇಸುವಿನ ವಿಷಯದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು. ಆದ್ದರಿಂದ ಕರ್ತ ಯೇಸು ಅವರ ಕೈಗಳಿಂದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟು ತಮ್ಮ ಕೃಪಾವಾಕ್ಯವನ್ನು ಖಚಿತಪಡಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಖರೆ ಪಾವ್ಲು ಅನಿ ಬಾರ್ನಾಬಾಸ್ ಇಕೊನಿಯಾತ್ ಲೈ ಯೆಳಾ ಪತರ್ ರಾವ್ನ್ ಧನಿಯಾಚ್ಯಾ ವಿಶಯಾತ್ ಧೈರ್ಯಾನ್ ಬೊಲ್ಲ್ಯಾನಿ, ಅನಿ ಧನಿಯಾನ್ ತೆಂಚ್ಯಾಕ್ನಾ ಚಮತ್ಕಾರಾಚಿ ಅನಿ ಅಜಾಪಾಚಿ ಕಾಮಾ ಕರುನ್ ಅಪ್ಲಿ ಕುರ್ಪೆಚಿ ಖಬರ್ ಘಟ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |