Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅನ್ಯಧರ್ಮದವರು ಮತ್ತು ಯೆಹೂದ್ಯರು ತಮ್ಮ ಅಧಿಕಾರಿಗಳೊಡನೆ ಸೇರಿ ಪ್ರೇಷಿತರಿಗೆ ಕಿರುಕುಳಕೊಡಲು ಹಾಗೂ ಅವರ ಮೇಲೆ ಕಲ್ಲು ತೂರಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೂದ್ಯರಲ್ಲದವರಲ್ಲಿ ಮತ್ತು ಯೆಹೂದ್ಯರಲ್ಲಿ ಕೆಲವರು ತಮ್ಮ ನಾಯಕರೊಡನೆ ಸೇರಿಕೊಂಡು ಪೌಲ ಬಾರ್ನಬರನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ನಾಯಕರನ್ನು ಕೂಡಿಕೊಂಡು ಪೌಲ, ಬಾರ್ನಬರನ್ನು ಅವಮಾನ ಮಾಡಿ ಅವರ ಮೇಲೆ ಕಲ್ಲೆಸೆಯಬೇಕೆಂದು ನುಗ್ಗಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜುದೆವಾಂಚ್ಯಾ ನ್ಹಯ್ ಹೊಲ್ಲ್ಯಾತ್ಲೆ ಥೊಡೆ ಅನಿ ಜುದೆವಾಂಚೆ ಥೊಢಿ ಲೊಕಾ ಅಪ್ಲ್ಯಾ ಮುಖಂಡಾಂಚ್ಯಾ ವಾಂಗ್ಡಾ ಮಿಳುನ್ ಅಪೊಸ್ತಲಾಂಚ್ಯಾ ವಾಂಗ್ಡಾ ಬರೆ ಚಾಲ್ವುನ್ ಘೆವ್ನ್ ಜಾಯ್‌ನಸ್ತಾನಾ ತೆಂಕಾ ಬುರ್ಶೆ ಕರುಚೆ ಮನುನ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:5
16 ತಿಳಿವುಗಳ ಹೋಲಿಕೆ  

ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.


ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು.


ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.


ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.


ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.


ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು, ಮೋವಾಬ್ಯರು, ಹಗ್ರೀಯರು,


ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.


ಆದರೆ ನಂಬದೆ ಹೋದ ಯೆಹೂದ್ಯರು, ಅನ್ಯಜನರ ಮನಸ್ಸನ್ನು ಈ ಸಹೋದರರ ವಿರುದ್ಧವಾಗಿ ಪ್ರಚೋದಿಸಿ ಕೆಡಿಸಿದರು.


ಆಗ ಆ ಊರಿನ ಜನರು ಎರಡು ಭಾಗವಾದರೂ; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.


ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, ಸ್ವಂತ ಜನರಿಂದ ಅಪಾಯಗಳೂ, ಅನ್ಯಜನರಿಂದ ಅಪಾಯಗಳೂ, ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು.


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.


ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು