Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು - ನೀವು ಮೋಶೆಯ ಗ್ರಂಥದಲ್ಲಿ ಹೇಳಿರುವ ನೇಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೆಲವು ಜನರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು ಅಲ್ಲಿಯ ಸಹೋದರರಿಗೆ, “ಮೋಶೆ ಬೋಧಿಸಿದ ಪದ್ಧತಿಯಂತೆ ನೀವು ಸುನ್ನತಿ ಹೊಂದದಿದ್ದರೆ ನೀವು ರಕ್ಷಣೆ ಹೊಂದಲಾರಿರಿ,” ಎಂದು ಬೋಧಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಉಲ್ಲಿ ಲೊಕಾ ಜುದೆಯಾ ಮನ್ತಲ್ಯಾ ಶಾರಾಕ್ನಾ ಅಂತಿಯೊಕ್ ಮನ್ತಲ್ಯಾ ಶಾರಾಕ್ ಯೆಲ್ಲಿ, ತುಮಿ ಸುನ್ನತ್ ಕರುನ್ ಘೆಯ್ನಸ್ಲ್ಯಾರ್ ತುಮ್ಕಾ ಸುಟ್ಕಾ ಹೊಯ್ನಾ ಮೊಯ್ಜೆಚ್ಯಾ ಖಾಯ್ದ್ಯಾತ್ ಸಾರ್ಕೆ ಸುನ್ನತ್ ಕರುನ್ ಘೆವ್ಚೆ ಮನುನ್ ಸಾಂಗಲ್ಲೆ ಹಾಯ್ ಮನುನ್ ತೆನಿ ಜುದೆವ್ ನ್ಹಯ್ ಅಸಲ್ಲ್ಯಾ ದೆವಾಚ್ಯಾ ಲೊಕಾಕ್ನಿ ಶಿಕಾಪ್ ಕರುಲಾಗ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:1
25 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.


ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.


ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು.


“ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,


ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.


ಹದಿನಾಲ್ಕು ವರ್ಷಗಳ ನಂತರ ನಾನು ಬಾರ್ನಬನ ಜೊತೆಯಲ್ಲಿ ತೀತನನ್ನು ಸಹ ಕರೆದುಕೊಂಡು, ಮತ್ತೊಮ್ಮೆ ಯೆರೂಸಲೇಮಿಗೆ ಹೋದೆನು.


ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.


ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಅಂದರು.


ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.


ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.


ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;


ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.


ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು