Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಆದುದರಿಂದ ನನ್ನ ತೀರ್ಮಾನವೇನೆಂದರೆ : ದೇವರ ಕಡೆಗೆ ತಿರುಗುತ್ತಿರುವ ಅನ್ಯಧರ್ಮೀಯರನ್ನು ತೊಂದರೆಗೆ ಈಡುಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗಿರಲಾಗಿ ನನ್ನ ಅಭಿಪ್ರಾಯ ಏನಂದರೆ - ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಆದ್ದರಿಂದ, ದೇವರ ಕಡೆಗೆ ತಿರುಗಿಕೊಂಡ ಯೆಹೂದ್ಯರಲ್ಲದ ಸಹೋದರರಿಗೆ ನಾವು ತೊಂದರೆ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಆದ್ದರಿಂದ, ದೇವರ ಕಡೆಗೆ ತಿರುಗುತ್ತಿರುವ ಯೆಹೂದ್ಯರಲ್ಲದವರಿಗೆ ನಾವು ತೊಂದರೆ ಮಾಡಬಾರದು ಎಂಬುದೇ ನನ್ನ ತೀರ್ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತಸೆ ಹೊವ್ನ್ ಜುದೆವ್ ನ್ಹಯ್ ಹೊಲ್ಲ್ಯಾ ದೆವಾಕ್ಡೆ ಪರ್ತುನ್ ಯೆಲ್ಲ್ಯಾ ಲೊಕಾಕ್ನಿ ಅಮಿ ತರಾಸ್ ದಿತಲೆ ನಕ್ಕೊ, ಹಿ ಮಾಜೆ ಸಲಹಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:19
12 ತಿಳಿವುಗಳ ಹೋಲಿಕೆ  

ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.


ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ


“ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,


ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?


ನೀನು ಅನ್ಯಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ; ‘ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ, ಮೋಶೆಯ ಧರ್ಮವನ್ನು ತ್ಯಜಿಸಬೇಕೆಂಬುದಾಗಿ ಬೋಧಿಸುತ್ತಿರುವೆ’ ಎಂದು ನಿನ್ನ ಕುರಿತಾಗಿ ಹೇಳಿದ್ದಾರೆ.


ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ಕುರಿತಾದರೋ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕತ್ತು ಹಿಸುಕಿ ಕೊಂದದ್ದನ್ನೂ ಅನೈತಿಕತೆಯನ್ನೂ ಬಿಟ್ಟು ದೂರವಾಗಿರಬೇಕೆಂಬುದಾಗಿ ನಾವು ತೀರ್ಮಾನಿಸಿದ ನಿಯಮಗಳನ್ನು ಬರೆದು ಕಳುಹಿಸಿದೆವಲ್ಲಾ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು