Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ಹಾದರವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ರಕ್ತವನ್ನೂ ವಿಸರ್ಜಿಸಬೇಕೆಂದು ನಾವು ಅವರಿಗೆ ಕಾಗದವನ್ನು ಬರೆದು ಅಪ್ಪಣೆಕೊಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ಈ ವಿಷಯಗಳನ್ನು ತಿಳಿಸೋಣ: ವಿಗ್ರಹಗಳಿಗೆ ಅರ್ಪಿಸಿದ ಆಹಾರವನ್ನು ತಿನ್ನಬೇಡಿರಿ. (ಈ ಆಹಾರ ಅಶುದ್ಧವಾದದ್ದು.) ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದರ ಬದಲಾಗಿ ನಾವು ಅವರಿಗೆ, ದೇವರಲ್ಲದವುಗಳಿಂದ ಮಲಿನವಾದ ಆಹಾರದಿಂದಲೂ ಅನೈತಿಕತೆಯಿಂದಲೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ರಕ್ತದಿಂದಲೂ ದೂರವಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆಚ್ಯಾ ಬದ್ಲಾಕ್ ಅಮಿ ತೆಂಕಾ ಎಕ್ ಚಿಟ್ ಲಿವ್ನ್ ಹಿ ವಿಶಯಾ ಕಳ್ವುಂವಾ, ಮುರ್ತಿಯಾಕ್ನಿ ಬಲಿ ಭೆಟ್ವಲ್ಲೆ ಖಾನ್ ಖಾವ್ನಕಾಸಿ ಹೆ ಖಾನ್ ಪವಿತ್ರ್ ನ್ಹಯ್, ಕಸ್ಲೊಬಿ ಲೈಂಗಿಕ್ ಪಾಪ್ ಕರುನಕಾಸಿ ಗಳೊ ಚಿರ್ಡುನ್ ಜಿವ್ ಕಾಡಲ್ಲ್ಯಾ ಜನಾವರಾಂಚೆ ಮಾಸ್ ನಾತರ್ ರಗಾತ್ ಖಾವ್ನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:20
47 ತಿಳಿವುಗಳ ಹೋಲಿಕೆ  

ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”


ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.


ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.


ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.


ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.


ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ಕುರಿತಾದರೋ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕತ್ತು ಹಿಸುಕಿ ಕೊಂದದ್ದನ್ನೂ ಅನೈತಿಕತೆಯನ್ನೂ ಬಿಟ್ಟು ದೂರವಾಗಿರಬೇಕೆಂಬುದಾಗಿ ನಾವು ತೀರ್ಮಾನಿಸಿದ ನಿಯಮಗಳನ್ನು ಬರೆದು ಕಳುಹಿಸಿದೆವಲ್ಲಾ” ಎಂದು ಹೇಳಿದರು.


ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.


ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,


ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.


ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು.


ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.


ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.


ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,


ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.


ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.


ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.


ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು,


ನೀವು ರಕ್ತವನ್ನು ಮಾತ್ರ ಊಟಮಾಡಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ರಕ್ತವನ್ನು ಮಾತ್ರ ತಿನ್ನಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ” ಎಂದು ಹೇಳಿತು.


ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು,


ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.


ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.


“ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.


ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು.


ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?


ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸವನ್ನು ರಕ್ತದೊಡನೆ ತಿಂದರು.


ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.


ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,


“‘ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು.


“‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.


ಆಗ ಕೆಲವರು ಸೌಲನಿಗೆ, “ನೋಡು, ಜನರು ರಕ್ತದೊಂದಿಗೆ ಊಟಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡುತ್ತಾರೆ” ಎಂದು ತಿಳಿಸಿದರು. ಸೌಲನು ಅವರಿಗೆ, “ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ದೊಡ್ಡ ಕಲ್ಲೊಂದನ್ನು ಹೊರಳಿಸಿ ತಂದಿಟ್ಟು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು