Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ವಿಗ್ರಹಗಳಿಗೆ ಅರ್ಪಿಸಿರುವ ಆಹಾರವನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ನೀವು ಇವುಗಳಿಂದ ದೂರವಿದ್ದರೆ ನಿಮಗೆ ಒಳ್ಳೆಯದಾಗುವುದು. ನಿಮಗೆ ಶುಭವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕು. ಇವುಗಳಿಂದ ನಿಮ್ಮನ್ನು ಕಾಪಾಡಿಕೊಳ್ಳುವುದರಿಂದ ನಿಮಗೆ ಒಳಿತಾಗುವುದು. ನಿಮಗೆ ಶುಭವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಮುರ್ತಿಯಾಕ್ನಿ ಭೆಟ್ವಲ್ಲೊ ಖಾನ್ ಖಾವ್ನಕಾಸಿ, ಅನಿ ರಗಾತ್ ಖಾವ್ನಕಾಸಿ, ಗಳೊ ಚಿರ್ಡುನ್ ಜಿವ್ ಕಾಡಲ್ಲ್ಯಾ ಜನಾವರಾಂಚೆ ಮಾಸ್ ಖಾವ್ನಕಾಸಿ, ಕಸ್ಲೊಬಿ ಅನೈತಿಕ್ ಅನಿ ಲೈಂಗಿಕ್ ಪಾಪ್ ಕರುನಕಾಸಿ, ತುಮಿ ಹ್ಯಾತುರ್ನ್ನಾ ಧುರ್ ರ್‍ಹಾಲ್ಯಾರ್ ತುಮ್ಕಾ ಬರೆ ಹೊತಾ ಅನಿ ತುಮ್ಕಾ ಬರೆಚ್ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:29
20 ತಿಳಿವುಗಳ ಹೋಲಿಕೆ  

ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.


ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ಕುರಿತಾದರೋ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕತ್ತು ಹಿಸುಕಿ ಕೊಂದದ್ದನ್ನೂ ಅನೈತಿಕತೆಯನ್ನೂ ಬಿಟ್ಟು ದೂರವಾಗಿರಬೇಕೆಂಬುದಾಗಿ ನಾವು ತೀರ್ಮಾನಿಸಿದ ನಿಯಮಗಳನ್ನು ಬರೆದು ಕಳುಹಿಸಿದೆವಲ್ಲಾ” ಎಂದು ಹೇಳಿದರು.


ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.


ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.


ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.


ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,


ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.


ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.


ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.


ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.


ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು.


“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,


ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು.


ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.


ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.


ರಕ್ತವನ್ನು ಮಾತ್ರ ತಿನ್ನಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು