Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಇತ್ತ ಪೌಲ ಮತ್ತು ಬಾರ್ನಬ ಅಂತಿಯೋಕ್ಯದಲ್ಲೇ ತಂಗಿದ್ದು ಅನೇಕರೊಡಗೂಡಿ ಪ್ರಭುವಿನ ವಾಕ್ಯವನ್ನು ಬೋಧಿಸುತ್ತಾ ಶುಭಸಂದೇಶವನ್ನು ಸಾರುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆದರೆ ಪೌಲ ಬಾರ್ನಬರು ಅಂತಿಯೋಕ್ಯದಲ್ಲಿ ತಂಗಿದ್ದು ಇತರ ಅನೇಕರೊಂದಿಗೆ ಸೇರಿಕೊಂಡು ಸುವಾರ್ತೆಯನ್ನು ಸಾರಿದರು ಮತ್ತು ಪ್ರಭುವಿನ ಸಂದೇಶವನ್ನು ಜನರಿಗೆ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದರೆ ಪೌಲನು ಮತ್ತು ಬಾರ್ನಬರು ಅಂತಿಯೋಕ್ಯದಲ್ಲಿಯೇ ಉಳಿದುಕೊಂಡು ಅನೇಕರಿಗೆ ಕರ್ತ ಯೇಸುವಿನ ವಾಕ್ಯವನ್ನು ಬೋಧಿಸುತ್ತಾ ಸುವಾರ್ತೆ ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಪಾವ್ಲು ಅನಿ ಬಾರ್ನಾಬಾಸ್ ಅಂತಿಯೊಕಾತ್ ರ್‍ಹಾವ್ನ್, ಹುರಲ್ಲ್ಯಾ ಲೈ ಲೊಕಾಂಚ್ಯಾ ವಾಂಗ್ಡಾ ಮಿಳುನ್ ದೆವಾಚಿ ಬರಿ ಖಬರ್ ಪರ್ಗಟ್ ಕರ್‍ಲ್ಯಾನಿ ಅನಿ ಧನಿಯಾಚೆ ಶಿಕಾಪ್ ಲೊಕಾಕ್ನಿ ಕಳ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:35
11 ತಿಳಿವುಗಳ ಹೋಲಿಕೆ  

ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.


ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.


ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.


ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.


ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಹೆಚ್ಚುಕಾಲ ತಂಗಿದ್ದರು.


ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.


ಬಾರ್ನಬನು ಮತ್ತು ಸೌಲನು ಮಾಡಬೇಕಾದ ಧರ್ಮ ಕಾರ್ಯವನ್ನು ಮುಗಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರೆದುಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.


ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.


ಆದರೆ ಸೀಲನಿಗೆ ಅಲ್ಲೇ ಇರುವುದು ಒಳ್ಳೆಯದೆಂದು ತೋಚಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು